ನವದೆಹಲಿ: ರಾಷ್ಟ್ರಪತಿಯವರನ್ನು ‘ರಾಷ್ಟ್ರಪತ್ನಿ’ ಎನ್ನುವ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಇಂದು ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆಯುವ ಮೂಲಕ ಕ್ಷಮೆ ಕೇಳಿದ್ದಾರೆ.
ಇನ್ನು ಪತ್ರದಲ್ಲಿ ನೀವು ಹೊಂದಿರುವ ಸ್ಥಾನವನ್ನು ವಿವರಿಸುವಾಗ ತಪ್ಪು ಪದವನ್ನು ಬಳಸಿದ್ದಕ್ಕಾಗಿ ವಿಷಾದವನ್ನು ವ್ಯಕ್ತಪಡಿಸಲು ನಾನು ಈ ಪತ್ರ ಬರೆಯುತ್ತಿದ್ದೇನೆ. ನಾಲಿಗೆ ತಪ್ಪಾಗಿ ಹೊರಳಿ ಈ ಪ್ರಮಾದವಾಗಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಮತ್ತು ಇದನ್ನು ಸ್ವೀಕರಿಸಬೇಕೆಂದು ವಿನಂತಿಸುತ್ತೇನೆ’ ಎಂದು ಉಲ್ಲೇಖಿಸಿದ್ದಾರೆ.
ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅಧೀರ್ ರಂಜನ್ ಚೌಧರಿ ಅವರು ಲೋಕಸಭೆ ಕಲಾಪದ ವೇಳೆ ‘ರಾಷ್ಟ್ರಪತ್ನಿ’ ಎಂದು ಉಲ್ಲೇಖಿಸಿದ್ದರು. ಅವರ ಈ ಮಾತು ಭಾರಿ ವಿವಾದ ಸೃಷ್ಟಿ ಮಾಡಿತ್ತು.
ಈ ವಿಚಾರದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗವು ಅಧೀರ್ ರಂಜನ್ ಚೌಧರಿ ಅವರಿಗೆ ನೋಟಿಸ್ ನೀಡಿ ವಿವರಣೆ ಕೇಳಿತ್ತು. ಅಲ್ಲದೆ, ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಅವಹೇಳನಕಾರಿ ಹೇಳಿಕೆಗಾಗಿ ಅಧೀರ್ ರಂಜನ್ ಚೌಧರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಎನ್ಸಿಡಬ್ಲ್ಯು ಪತ್ರ ಬರೆದಿತ್ತು.
ಈ ವಿವಾದವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಚಿವೆ ಸ್ಮೃತಿ ಇರಾನಿ ಅವರ ಮುಖಾಮುಖಿಗೂ ಕಾರಣವಾಗಿತ್ತು.
Congress MP Adhir Ranjan Chowdhury tenders apology to President Droupadi Murmu over “Rashtrapatni” remark.
“…I assure you that it was a slip of the tongue. I apologise and request you to accept the same,” reads his letter. pic.twitter.com/dM1shdVU2C
— ANI (@ANI) July 29, 2022