Friday, November 22, 2024

ಗುಡ್ಡ ಕುಸಿತ-ನಾಲ್ವರು ಸಾವು

ಭಟ್ಕಳ : ತಾಲೂಕಿನಲ್ಲಿ ದಾಖಲೆ ಪ್ರಮಾಣದ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಗೆ ಭಟ್ಕಳದ ಚೌಥನಿ ನದಿ ಉಕ್ಕಿ ಹರಿಯುತ್ತಿದ್ದು, ತಾಲೂಕಿನ ಬಹುತೇಕ ಮನೆಗಳಿಗೆ ನೀರು ನುಗ್ಗಿ ಜಲಾವೃತವಾಗಿದೆ.

ಮೂಢ ಭಟ್ಕಳ ಬೈಪಾಸ್​ನಿಂದ ಮುಟ್ಟಳ್ಳಿಗೆ ಸಂಪರ್ಕಿಸುವ ರಸ್ತೆಯೂ ಸಂಪೂರ್ಣ ಜಲಾವೃತಗೊಂಡಿದೆ. ಮಣ್ಕುಳಿ, ಚೌಥನಿ, ಮುಂಡಳ್ಳಿ, ಮುಟ್ಟಳ್ಳಿ, ಮೂಢ ಭಟ್ಕಳ ಬೈಪಾಸ್​ ಸೇರಿದಂತೆ ಅನೇಕ ಗ್ರಾಮಗಳು ಮಳೆಗೆ ಮುಳುಗಡೆಯಾಗಿದೆ. ಜಲಾವೃತಗೊಂಡಿರುವ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುವ ಕಾರ್ಯವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮಾಡುತ್ತಿದ್ದಾರೆ.

ಮಣ್ಕುಳಿಯಿಂದ ಮೂಢ ಭಟ್ಕಳ ಬೈಪಾಸಿನ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಸ್ಥಳಕ್ಕೆ ಎನ್​​​​ಡಿಆರ್​ಎಫ್ ತಂಡ ಆಗಮಿಸಿದ್ದು ರಕ್ಷಣಾಕಾರ್ಯ ಮುಂದುವರೆದಿದೆ. ಮುಟ್ಟಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೇರಿಪಾಲ್ ನಾರಾಯಣ ಎಂಬ ಮನೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಮನೆ ಸಂಪೂರ್ಣ ನೆಲಸಮವಾಗಿದ್ದು ಮನೆಯಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

RELATED ARTICLES

Related Articles

TRENDING ARTICLES