Sunday, October 27, 2024

ಚಾಮರಾಜಪೇಟೆ ಮೈದಾನ ಕಂದಾಯ ಇಲಾಖೆ ಸುಪರ್ದಿಗೆ..!

ಚಾಮರಾಜಪೇಟೆ : ಈದ್ಗಾ ವಿವಾದದ ಬಗ್ಗೆ ವರ್ಕ್ಫ್ ಬೋರ್ಡ್ ಸಲ್ಲಿಸಿದ್ದ ಅರ್ಜಿಯನ್ನು ಬಿಬಿಎಂಪಿ ವಜಾ ಮಾಡಿದ್ದು, ಈದ್ಗಾ ಮೈದಾನ ಕಂದಾಯ ಇಲಾಖೆ ಆಸ್ತಿ ಎಂದು ಜಂಟಿ ಆಯುಕ್ತ ಶ್ರೀನಿವಾಸ್ ಆದೇಶ ಹೊರಡಿಸಿದ್ದಾರೆ.

ಇನ್ನು, ಈ ವೇಳೆ ಮಾತನಾಡದ ಅವರು, ಈ ಹಿಂದೆ ಚಾಮರಾಜಪೇಟೆ ಆಟದ ಮೈದಾನವನ್ನು ವರ್ಕ್ಫ್ ಬೋರ್ಡ್ ಹೆಸರಿಗೆ ಖಾತೆ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಅರ್ಜಿಯನ್ನು ವಜಾಗೊಳಿಸಿದ್ದು, ಬಿಬಿಎಂಪಿ ದಾಖಲೆಗಳಲ್ಲಿ ಈ ಆಸ್ತಿಯನ್ನು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಆಸ್ತಿಯೆಂದು ನಮೂದಿಸಲು ಸೂಚನೆ ನೀಡಿದೆ.

ವರ್ಕ್ಫ್ ಬೋರ್ಡ್ ಆಸ್ತಿಯ ಬಗ್ಗೆ ಹಕ್ಕು ಸ್ಥಾಪಿಸಬೇಕಿದ್ದಲ್ಲಿ ಕಂದಾಯ ಇಲಾಖೆ ಬಳಿ ವ್ಯವಹರಿಸಬೇಕು ಎಂದು ತಿಳಿಸಿದರು. ಈದ್ಗಾ ಮೈದಾನಕ್ಕೂ ವಕ್ಫ್ ಬೋರ್ಡ್‌ಗೂ ಯಾವುದೇ ಸಂಬಂಧ ಇಲ್ಲ. ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು, ವಕ್ಫ್ ಬೋರ್ಡ್ ಹಕ್ಕು ಸಾಧಿಸಲು ಯಾವುದೇ ದಾಖಲೆ ಇಲ್ಲ. ಇದರಿಂದಾಗಿ ಈ ಆಟದ ಮೈದಾನವನ್ನು ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆ ಎಂದು ನಮೂದಿಸಲು ಬಿಬಿಎಂಪಿ ಸೂಚನೆ ನೀಡಿದೆ.

ಇಡೀ ಆಟದ ಮೈದಾನ ಇನ್ಮುಂದೆ ಕಂದಾಯ ಇಲಾಖೆಗೆ ಸೇರಿದ ಆಸ್ತಿಯಾಗಿದ್ದು, ದಾಖಲೆಗಳನ್ನು ಪರಿಶೀಲಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ ಎಂದು ಮಾಹಿತಿ ನೀಡಿದರು. ಇನ್ನೂ ಕಾನೂನು ಹೋರಾಟಕ್ಕೆ ವಕ್ಫ್ ಬೋರ್ಡ್ ನಿರ್ಧರಿಸಿದ್ದು, ಲೀಗಲ್ ಟೀಮ್ ನೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ವಕ್ಛ್ ಬೋರ್ಡ್ ಮುಂದಾಗಿದೆ.

RELATED ARTICLES

Related Articles

TRENDING ARTICLES