ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಹೆಚ್ಚಳ,ಮಂಕಿಪಾಕ್ಸ್ ಭೀತಿ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಾಂತ್ರಿಕ ಸಲಹಾ ಸಮಿತಿ ಜತೆ ಸಭೆ ಕರೆದಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಗೆ ಆರೋಗ್ಯ ಸೌಧದಲ್ಲಿ ಸಭೆ ನಡೆಸಲಿರುವ ಸಚಿವ ಸುಧಾಕರ್ ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ಟೆಸ್ಟಿಂಗ್ ಹೆಚ್ಚಿಸುವಂತೆ ರಾಜ್ಯ ಆರೋಗ್ಯ ಇಲಾಖೆಗೆ ಪತ್ರ ಬರೆದಿದ್ದ ಹಿನ್ನಲೆಯಲ್ಲಿ ಆರೋಗ್ಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಜತೆ ಸಭೆ ನಡೆಸಲಿದ್ದಾರೆ.
ರಾಜ್ಯದ ಕೋವಿಡ್ ಪ್ರಕರಣಗಳ ಬಗ್ಗೆ ಜಿಲ್ಲಾವಾರು ಮಾಹಿತಿ ಪಡೆಯಲಿರುವ ಅವರು, ಜೊತೆಗೆ ಮಂಕಿಪಾಕ್ಸ್, ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ಖಾಯಿಲೆಗಳ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆ ಮಾಡಲಿದ್ದಾರೆ. ಇನ್ನು, ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ರ್ಯಾಂಡಮ್ ಟೆಸ್ಟ್‌ಗಳನ್ನು ಮಾಡುವಂತೆ ಸೂಚನೆ ನೀಡಿದ್ದು, ಏರ್ಪೋರ್ಟ್,ರೈಲ್ವೇ ಸ್ಟೇಷನ್,ಬಸ್ ಸ್ಟಾಪ್,ಮಾಲ್‌ಗಳಲ್ಲಿ RAT ಟೆಸ್ಟ್ ಪ್ರಮಾಣ ಹೆಚ್ಚಿಸುವಂತೆ ಸೂಚನೆ ಸಾಧ್ಯತೆ ಇದೆ. ಗಡಿ ಜಿಲ್ಲೆಗಳಲ್ಲಿ, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚು ಕಾಳಜಿ ವಹಿಸುವಂತೆ ಸೂಚನೆ ನೀಡಿದ್ದು, ಕೋವಿಡ್ ಬೂಸ್ಟರ್ ಡೋಸ್ ಪ್ರಮಾಣವನ್ನು ಮತ್ತಷ್ಟು ಹೆಚ್ಚಳಕ್ಕೆ ಸೂಚನೆ ಸಾಧ್ಯತೆ ಇದೆ.