ಬೆಂಗಳೂರು : ಆಗಸ್ಟ್ 20 ರವರೆಗೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಮೂರು ದಿನಗಳ ಕಾಲ ಗುಜರಾತ್, ರಾಜಸ್ಥಾನ್, ಮಹಾರಾಷ್ಟ್ರ, ಬಿಹಾರ, ಮಧ್ಯಪ್ರದೇಶ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಆಗಸ್ಟ್ 17 ರಂದು ದಕ್ಷಿಣ ರಾಜಸ್ಥಾನ, ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇನ್ನು, ಇದರ ಹೊರತಾಗಿ ಸೌರಾಷ್ಟ್ರ ಮತ್ತು ಕಛ್ ಪ್ರದೇಶಗಳಲ್ಲಿ ಆಗಸ್ಟ್ 17 ಮತ್ತು ಆಗಸ್ಟ್ 18 ರ ನಡುವೆ ಮಳೆಯಾಗಬಹುದು. ಇದೇ ವೇಳೆ ಗೋವಾ ಮತ್ತು ಕೊಂಕಣ ಪ್ರದೇಶಗಳಲ್ಲಿ ಇದೇ 20ರವರೆಗೆ ಮಳೆಯಾಗಬಹುದು. ಮುಂದಿನ ಮೂರು ದಿನಗಳ ಕಾಲ ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ. ಇದಲ್ಲದೇ ಹಿಮಾಚಲ ಪ್ರದೇಶದಲ್ಲಿ ಆಗಸ್ಟ್ 20ರವರೆಗೆ ಮಳೆಯಾಗುವ ಸಾಧ್ಯತೆ ಇದೆ.