ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ನಡೆಸಲು ನಿರ್ಧರಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೆ ಮುಂದೂಡಲಾಗಿದೆ.
ಈ ಮೊದಲು ಜುಲೈ 28ರಂದು ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತಾದರೂ ಆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಸಂಭವಿಸಿದ ಕಾರಣ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೆಚ್ಚಾಗಿದ್ದ ಕಾರಣ ಜನೋತ್ಸವವನ್ನು ಆಗಸ್ಟ್ 28ಕ್ಕೆ ಮುಂದೂಡಲಾಗಿತ್ತು. ಇದೀಗ ಮತ್ತೊಮ್ಮೆ ಜನೋತ್ಸವವನ್ನು ಮುಂದೂಡಲಾಗಿದೆ.
ಗೌರಿ-ಗಣೇಶ ಹಬ್ಬದ ಆಸುಪಾಸಿನಲ್ಲಿ ಕಾರ್ಯಕ್ರಮ ನಡೆಯುವುದರಿಂದ ಪಕ್ಷದ ನಾಯಕರು, ಕಾರ್ಯಕರ್ತರು ಪೂರ್ಣ ಪ್ರಮಾಣದಲ್ಲಿ ಪಾಲ್ಗೊಳ್ಳುವುದು ಕಷ್ಟ ಎನ್ನುವ ಕಾರಣಕ್ಕೆ ಮುಂದೂಡಲಾಗಿದೆ ಎನ್ನುವ ಕಾರಣವನ್ನು ಸರ್ಕಾರ ನೀಡಿದೆ.