ಹುಬ್ಬಳ್ಳಿ: ರಂಭಾಪುರಿ ಶ್ರೀಗಳ ಮುಂದೆ ಮಾಜಿ ಸಿಎಂ ಸಿದ್ಧರಾಮಯ್ಯ ಪಶ್ಚಾತಾಪ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಸಿದ್ಧರಾಮಯ್ಯ ಅವರಲ್ಲಿ ಸ್ಪಷ್ಟತೆ ಕೇಳಬೇಕು. ಶ್ರೀಗಳ ನಡುವೆ ಹಾಗೂ ಸಿದ್ಧರಾಮಯ್ಯ ನಡುವೆ ಯಾವ ಸಂಭಾಷಣೆ ನಡೆದಿದೆ ಅವರನ್ನೇ ಕೇಳಬೇಕು. ರಾಜ್ಯದಲ್ಲಿ ಲಿಂಗಾಯತ ಸಮಾಜದ 99 ಉಪಪಂಗಡಗಳಿಗೆ ಸೌಲಭ್ಯ ಸಿಗುತ್ತಿಲ್ಲ. ಲಿಂಗಾಯತ ಉಪಪಂಗಡಗಳಿಗೆ ಶೈಕ್ಷಣಿಕ ಸೌಲಭ್ಯ ಸಿಗಬೇಕು ಅನ್ನೋ ಉದ್ದೇಶದಿಂದ ಆ ಪ್ರಯತ್ನ ಮಾಡಲಾಗಿತ್ತು.
ಚುನಾವಣೆ ನಂತರ ಎಲ್ಲ ಸ್ವಾಮೀಜಿಗಳ ನೇತೃತ್ವದಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗುವುದು. ಚನಾವಣೆ ನಂತರ ಈ ವಿಚಾರವಾಗಿ ಚರ್ಚೆ ಮಾಡಲಿದ್ದೇವೆ. ನಾವು ಯಾವುದೇ ಧರ್ಮ ಒಡೆದಿಲ್ಲ ಶೈಕ್ಷಣಿಕ ವಿಚಾರವಾಗಿ ಪ್ರಯತ್ನ ಮಾಡಿದ್ದೇವೆ. ಸೈದ್ದಾಂತಿಕ ವಿಚಾರಗಳು ಎಲ್ಲವೂ ಸರಿಯಿಲ್ಲ. ಈಗ ರಾಜ್ಯದಲ್ಲಿ ಉಪ ಪಂಗಡಗಳು ಬೇರೆ ಬೇರೆಯಾಗುತ್ತಿವೆ. ಹೀಗಾಗಿ ನಾವು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ ಧರ್ಮ ಒಡೆಯುವ ಕೆಲಸ ಮಾಡಿಲ್ಲ ಎಂದು ಎಂ.ಬಿ ಪಾಟೀಲ್ ಹೇಳಿದ್ದಾರೆ.