ಬೆಂಗಳೂರು : ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ ಸ್ಥಾನ ನೀಡಿದ್ದು, ಇದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಡವಟ್ಟಿನಿಂದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ.
21 ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್ ಮತ್ತು ಪ್ರತಿಷ್ಠಾನಗಳು, ಹಾಲಿ ಟ್ರಸ್ಟ್ ಮತ್ತು ಪ್ರತಿಷ್ಠಾನಗಳ ಅಧ್ಯಕ್ಷರು, ಸದಸ್ಯರ ಅಧಿಕಾರದ ಅವಧಿ ಮುಕ್ತಾಯ ಹಿನ್ನೆಲೆಯಲ್ಲಿ ಹೊಸ ನೇಮಕಾತಿ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಿದೆ.
ಇನ್ನು, ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ ಸ್ಥಾನ ನೀಡಿದ್ದು, ಚಿಕ್ಕಮಗಳೂರಿನ ಕೆ.ಪಿ.ಪೂರ್ಣಚಂದ್ರ ಪ್ರತಿಷ್ಠಾನದ ಸದಸ್ಯರಾಗಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಹೆಸರು ಆಯ್ಕೆ ಮಾಡಲಾಗಿದೆ. ಕಳೆದ ವರ್ಷದ ಡಿಸೆಂಬರ್ ನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಡವಟ್ಟಿನಿಂದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ.