Monday, November 25, 2024

ಆ.31 ಗಣೇಶ ಹಬ್ಬ: ಬೆಂಗಳೂರಿನಿಂದ 500ಕ್ಕೂ ಹೆಚ್ಚು KSRTC ಬಸ್​ ಸಂಚಾರ

ಬೆಂಗಳೂರು: ಆಗಸ್ಟ್​ 31 ರಂದು ಗೌರಿ ಗಣೇಶ ಹಬ್ಬದ ಹಿನ್ನಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಸ್​ಆರ್​​ಟಿಸಿ)ವು ಆಗಸ್ಟ್​ 30 ಹಾಗೂ 31 ರಂದು ವಿಶೇಷ ಸಾರಿಗೆ ಬಸ್​ ವ್ಯವಸ್ಥೆ ಕಲ್ಪಿಸಿದೆ.

ಗಣಪತಿ ಹಬ್ಬಕ್ಕಾಗಿ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹೋಗುವ ಸಾರ್ವಜನಿಕರ ಅನುಕೂಲಕ್ಕಾಗಿ ಆಗಸ್ಟ್​ 30 ಹಾಗೂ 31ರಂದು ಕೆಸ್​​ಆರ್​​ಟಿಸಿಯಿಂದ ಸುಮಾರು 500 ಕ್ಕೂ ಹೆಚ್ಚುವರಿ ಬಸ್ಸುಗಳ ಬಿಡಲು ವ್ಯವಸ್ಥೆ ಕಲ್ಪಿಸಲಾಗಿದೆ.

ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಚಿಕ್ಕಮಗಳೂರು, ಶಿವಮೊಗ್ಗ ಹಾಸನ ಕುಂದಾಪುರ, ತಿರುಪತಿ ಹೈದರಾಬಾದ್ ಹಾಗೂ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು ಹುಣಸೂರು ವಿರಾಜಪೇಟೆ ಕುಶಾಲನಗರ, ಶಾಂತಿನಗರ ಬಸ್​ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ಪ್ರಯಾಣಿಸಲಿವೆ.

ಇನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಆನ್ ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದ್ದು, 5ಕ್ಕೂ ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದಲ್ಲಿ ಶೇ 5 ರಷ್ಟು ರಿಯಾಯಿತಿ ನೀಡಲಾಗಿದೆ. ಹೋಗುವ ಹಾಗೂ ಬರುವ ಟಿಕೆಟ್ ಒಟ್ಟಿಗೆ ಖರೀದಿಸಿದಲ್ಲಿ 10% ರಿಯಾಯಿತಿ ನೀಡಲಾಗುವುದು. ರಾಜ್ಯದ ಹಾಗೂ ಅಂತರಾಜ್ಯದ ವಿವಿಧ ಸ್ಥಳಗಳಿಂದ ಆ. 31ರಂದು ಆಗಮಿಸುವ ಪ್ರಯಾಣಿಕರಿಗೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES

Related Articles

TRENDING ARTICLES