ಬೆಂಗಳೂರು: ಆಗಸ್ಟ್ 31 ರಂದು ಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರಿಂದ ದುಪ್ಪಟ್ಟು ಟಿಕೆಟ್ ವಸೂಲಿ ಆರೋಪ ಹಿನ್ನೆಲೆ ಸಾರಿಗೆ ಸಚಿವ ಶ್ರೀರಾಮುಲು ಮಾತನಾಡಿದ್ದಾರೆ.
ಧನಧಾಹಿ ಬಸ್ ಗಳು ದುಪ್ಪಟ್ಟು ದರ ನಿಗದಿ ಮಾಡಿ ಹಣ ವಸೂಲಿ ಮಾಡ್ತಿರೋದು ನನ್ನ ಗಮನಕ್ಕೆ ಬಂದಿದೆ. ಪ್ರಯಾಣಿಕರಿಗೆ ಹೊರೆಯಾಗದಂತೆ ನಿಗದಿಪಡಿಸಿದ ದರವನ್ನು ಮಾತ್ರ ಪಡೆಯಬೇಕು. ಅನಗತ್ಯವಾಗಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ ಎಂದು ಖಾಸಗಿ ಬಸ್ ಮಾಲೀಕರಲ್ಲಿ ಸಾರಿಗೆ ಸಚಿವ ಶ್ರೀರಾಮುಲು ವಿನಂತಿ ಮಾಡಿಕೊಂಡಿದ್ದಾರೆ.
ಯಾರಾದರೂ ಹೆಚ್ಚಿನ ದರ ಪಡೆದರೆ ಮಾಲೀಕರ ವಿರುದ್ದ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಕ್ರಮ ಹಣ ಸಂಪಾದನೆಯೇ ನಮ್ಮ ಏಕೈಕ ಗುರಿ ಎಂದರೆ ಕ್ರಮಕ್ಕೆ ಸಿದ್ದರಾಗಿ ಎಂದು ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.