Monday, July 1, 2024

ಪ್ರತಿಮೆ ಉದ್ಘಾಟನಾ ಅಭಿಯಾನಕ್ಕೆ ಚಾಲನೆ

ಬೆಂಗಳೂರು : ರಾಜ್ಯ ಸರ್ಕಾರ 108 ಅಡಿ ಕೆಂಪೇಗೌಡ ಪ್ರತಿಮೆಯನ್ನು ಕೆಂಪೇಗೌಡ ‌ಅಂತಾರಾಷ್ಟ್ರೀಯ ಏರ್ಪೋರ್ಟ್‌ನಲ್ಲಿ ಸ್ಥಾಪಿಸಿದೆ. ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಆದ್ರೆ, ಪ್ರತಿಮೆಯ ಮುಂಭಾಗದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ಇನ್ನೂ ನಿರ್ಮಾಣವಾಗಬೇಕಾಗಿದೆ. ಇದರಲ್ಲಿ ಗುಣಮಟ್ಟದ ಆ್ಯಂಪಿ ಥಿಯೇಟರ್, ಪಾಥ್‌ ವೇ, ಸುರಂಗ ನಿರ್ಮಾಣ, ಎವಿ ಎಕ್ಸಿಬಿಷನ್ ವ್ಯವಸ್ಥೆ, ತ್ರೀ-ಡಿ ಪ್ರೊಜೆಕ್ಷನ್, ಚಕ್ರಾಕಾರದ ಕಾರಂಜಿ, ಹೂದೋಟ, ವಿಐಪಿ ಲಾಂಜ್, ಕಿಯೋಸ್ಕ್, ವಿಶ್ರಾಂತಿ ಕೊಠಡಿಗಳು, ಅತ್ಯುತ್ತಮ ಹಾಸುಗಲ್ಲುಗಳು, ಪೆವಿಲಿಯನ್‌ಗಳು, ಕಾಂಕ್ರೀಟ್ ತಡೆಗೋಡೆ ಇರಲಿವೆ. ಬೆಂಗಳೂರಿನ ಇಂದಿನ ಕೀರ್ತಿಗೆ ಈ ನಗರಕ್ಕೆ ಬುನಾದಿ ಹಾಕಿದ ಕೆಂಪೇಗೌಡರೇ ಕಾರಣ. ಅವರ ಪ್ರತಿಮೆ ಉದ್ಘಾಟನೆಗೆ ಪೂರ್ವಭಾವಿಯಾಗಿ ಗುರುವಾರದಿಂದ 45 ದಿನಗಳ ಕಾಲ ರಾಜ್ಯ ಮಟ್ಟದ ಅಭಿಯಾನ ನಡೆಯಲಿದೆ. ಇದರ ಅಂಗವಾಗಿ ಎಲ್ಲ ಹಳ್ಳಿಗಳ ವ್ಯಾಪ್ತಿಯ ಕೆರೆಕಟ್ಟೆಗಳು ಮತ್ತು ನದಿಗಳಿಂದ ಪವಿತ್ರವಾದ ಮಣ್ಣು ಮತ್ತು ಜಲ ಸಂಗ್ರಹಿಸಲಾಗುತ್ತದೆ.

ಅಮೆರಿಕದಲ್ಲಿ ಸ್ಟ್ಯಾಚು ಆಫ್ ಲಿಬರ್ಟಿ, ಗುಜರಾತ್ನಲ್ಲಿ ಸ್ಟ್ಯಾಚ್ಯೂ ಆಫ್ ಯೂನಿಟಿ ಅನ್ನುವಂತೆ ಏರ್ಪೋರ್ಟ್ ‌ನಲ್ಲಿ ನಿರ್ಮಾಣವಾಗುತ್ತಿರೋ ಇದಕ್ಕೆ ಪ್ರಗತಿಯ ಪ್ರತಿಮೆ ಅಂತ ಹೆಸರಿಸಲಾಗಿದೆ. ಚುನಾವಣೆ ಹತ್ತಿರ ಬರ್ತಿದೆ. ಹೀಗಾಗಿ ಬರೋಬ್ಬರಿ ನೂರು‌ ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಜೀವನಕ್ಕೆ ಸಂಭಂಧಿಸಿದ 46 ಸ್ಥಳಗಳಿಗೆ ಕಾಯಕಲ್ಪ ನೀಡುತ್ತಿದೆ. ಮಾಗಡಿಯ ವೀರಸಮಾಧಿ ತಾಣವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ರೂಪುರೇಷೆ ನಿರ್ಮಾಣ ಮಾಡಿದೆ. ಚುನಾವಣೆ ಹತ್ತಿರ ಬರ್ತಿದೆ. ಹೀಗಾಗಿ ಶೀಘ್ರವಾಗಿ ಕಾಮಗಾರಿ ಆರಂಭ ಮಾಡಿ ನವೆಂಬರ್ ವೇಳೆಗೆ ಪೂರ್ಣಗೊಳಿಸಲು ಸರ್ಕಾರ ನಿರ್ಧರಿಸಿದೆ.ಅಲ್ಲದೇ, ಮೋದಿ ಏರ್ಪೋರ್ಟ್ ಟರ್ಮಿನಲ್ 2 ಉದ್ಘಾಟನೆಗೆ ಬೆಂಗಳೂರಿಗೆ ಬರಲಿದ್ದು, ಈ ಸಂದರ್ಭದಲ್ಲಿ ಕೆಂಪೇಗೌಡರ ಸ್ಮಾರಕ, ಪ್ರತಿಮೆ ಎಲ್ಲವೂ ಉದ್ಘಾಟನೆಗೊಳಿಸಲು ಸಿಎಂ ಬೊಮ್ಮಾಯಿ‌ ‌ಬಯಸಿದ್ದಾರೆ.

ಒಟ್ಟಿನಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದು ಉದ್ಘಾಟನೆ ಅಭಿಯಾನ ಪ್ರತಿ ಹಳ್ಳಿಯನ್ನು ತಲುಪಿ ಅಲ್ಲಿಂದ ಮಣ್ಣು ಸಂಗ್ರಹಿಸಲಿದೆ. ಈ ಮೂಲಕ ಕೆಂಪೇಗೌಡರ ಮಹತ್ವವನ್ನು ನಾಡಿಗೆ ಸಾರಲು ಸರ್ಕಾರ ಹೊರಟಿದೆ.

ರೂಪೇಶ್ ಬೈಂದೂರು ಪವರ್ ಟಿವಿ

RELATED ARTICLES

Related Articles

TRENDING ARTICLES