Thursday, December 19, 2024

ಸರ್ಕಾರದ ವಿರುದ್ಧ ವಿನೂತನವಾಗಿ ಪ್ರತಿಭಟನೆ ಮಾಡಿದ ನಲಪಾಡ್​​

ಬೆಂಗಳೂರು: ಕಳೆದ ಎರಡು ದಿನದಿಂದ ಸುರಿಯುತ್ತಿರುವ ಭಾರೀ ಮಳೆಗೆ ಅಕ್ಷರಶಃ ಬೆಂಗಳೂರು ಪ್ರವಾಹದಿಂದ ತತ್ತರಿಸಿದ್ದು, ರಾಜ್ಯ ಯೂತ್​ ಕಾಂಗ್ರೆಸ್​ ಅಧ್ಯಕ್ಷ ಮಹಮ್ಮದ್ ನಲಪಾಡ್ ರಾಜ್ಯ ಸರ್ಕಾರದ ವಿರುದ್ಧ ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ.

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಜಲಾವೃತ ರಸ್ತೆಯ ಮೇಲೆ ಗಾಳಿ ತುಂಬಿದ ರಬ್ಬರ್ ಟ್ಯೂಬ್ ಮೇಲೆ ಕುಳಿತು ನಲಪಾಡ್​ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ತದ ನಂತರ ಮಾತನಾಡಿ, ಬೆಂಗಳೂರು ಇಂದು ಪ್ರವಾಹದಲ್ಲಿ ಮುಳುಗಿರುವುದಕ್ಕೆ ಕಾರಣ ಬಿಜೆಪಿ ಸರ್ಕಾರ 40% ಕಮಿಷನ್‌ ಕಾರಣವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಹರಾಜನ್ನ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಟೀಕಿಸಿದರು.

RELATED ARTICLES

Related Articles

TRENDING ARTICLES