Friday, November 22, 2024

ಕನ್ನಡದಲ್ಲಿನ ಚೆಕ್ ಅಮಾನ್ಯ; ಬ್ಯಾಂಕ್’ಗೆ 85 ಸಾವಿರ ರೂ ದಂಡ

ಧಾರವಾಡ: ಬ್ಯಾಂಕನಲ್ಲಿ ಕನ್ನಡದಲ್ಲಿ ಬರೆದ ಚೆಕ್​ (ಕಾಸೋಲೆ)ನ್ನ ಅಮಾನ್ಯ ಮಾಡಿದ ಹಳಿಯಾಳದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಶಾಖೆಗೆ ಗ್ರಾಹಕರ ಆಯೋಗ ದಂಡ ವಿಧಿಸಿದೆ.

ಧಾರವಾಡದ ಇಂಗ್ಲೀಷ್ ಪ್ರಾಧ್ಯಾಪಕ ವಾದಿರಾಜಾಚಾರ್ಯ ಇನಾಮದಾರ ಎಂಬುವರು ತಮ್ಮ ಉಳಿತಾಯ ಖಾತೆಯಲ್ಲಿದ್ದ ಹಣ ಹಿಂಪಡೆಯಲು ಕನ್ನಡದಲ್ಲಿ ಚೆಕ್​ (ಕಾಸೋಲೆ) ಬರೆದು ಬ್ಯಾಂಕ್​ ಸಿಬ್ಬಂದಿಗಳಿಗೆ ಸಲ್ಲಿಸಿದ್ದರು. ಈ ವೇಳೆ ಹಳಿಯಾಳದ ಎಸ್‌ಬಿಐ ಶಾಖೆ ತಿರಸ್ಕರಿಸಿತ್ತು. ಈಗ ಖಾತೆದಾರ ವಾದಿರಾಜ್​ಗೆ ಬ್ಯಾಂಕ್​ 85,177 ರೂ ಪರಿಹಾರ ನೀಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಆದೇಶಿಸಿದೆ.

ಬ್ಯಾಂಕ್ ಸಿಬ್ಬಂದಿಗಳು ನಾನು ಕನ್ನಡಲ್ಲಿ ಬರೆದ ಚೆಕ್​ನ್ನ ಅಮಾನ್ಯಗೊಳಿಸಿದ್ದಾರೆ ಎಂದು ಬ್ಯಾಂಕ್​ ವಿರುದ್ಧ ಉಳಿತಾಯ ಖಾತೆದಾರ ವಾದಿರಾಜಾಚಾರ್ಯ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಈ ದೂರು ಪರೀಶಿಲಿಸಿದ ಆಯೋಗವು ದೂರುದಾರರ ಉಳಿತಾಯ ಖಾತೆಯಲ್ಲಿ 9 ಲಕ್ಷ ರೂ ಕ್ಕಿಂತ ಹೆಚ್ಚು ಹಣ ಇದ್ದರೂ ಕೂಡ ಕೇವಲ 6 ಸಾವಿರ ರೂ. ಮೌಲ್ಯದ ಚೆಕ್ಕನ್ನು ಕನ್ನಡ ಭಾಷೆಯಲ್ಲಿ ಬರೆದುದಕ್ಕಾಗಿ ಅಮಾನ್ಯ ಮಾಡಿರುವುದನ್ನ ಸೇವಾ ನ್ಯೂನ್ಯತೆ ಎಂದು ಪರಿಗಣಿಸಿ ಫಿರ್ಯಾದಿರಿಗೆ ಪರಿಹಾರ ಮತ್ತು ದಂಡ ರೂಪದಲ್ಲಿ ಒಟ್ಟು 85,177 ರೂ.ಗಳನ್ನು ಪಾವತಿಸುವಂತೆ ಆದೇಶಿಸಿದೆ.

RELATED ARTICLES

Related Articles

TRENDING ARTICLES