Friday, December 27, 2024

ಕುಮಾರಸ್ವಾಮಿ ಮಹಾಭಾರತದ ಶಕುನಿ ಇದ್ದಂತೆ : ಬಿ.ವೈ ರಾಘವೇಂದ್ರ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ, ಸಂಸದ ಬಿ.ವೈ ರಾಘವೇಂದ್ರ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಮಹಾಭಾರತದ ಶಕುನಿಗೆ ಹೋಲಿಸಿದ್ದಾರೆ.
ಹಾಸನದಲ್ಲಿ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ನಡೆಸಿದ ಕಲ್ಲುತೂರಾಟ ವಿರೋಧಿಸಿ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಸಂಸದ ಬಿ.ವೈ ರಾಘವೇಂದ್ರ, ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ”ಪ್ರೀತಂ ಗೌಡ ಮೇಲಿನ ದಬ್ಬಾಳಿಕೆ ಸಹಿಸಲ್ಲ. ಬಹುಮತವಿಲ್ಲದಿದ್ದರೂ, ಸರ್ಕಾರ ಮಾಡುವ ಮೂಲಕ, ಭಂಡತನ ತೋರಿರುವ ಮೈತ್ರಿ ಪಕ್ಷಗಳ ಮುಖಂಡರು ದಬ್ಬಾಳಿಕೆ ಮೂಲಕ ಬಿಜೆಪಿಯವರನ್ನು ಹತ್ತಿಕ್ಕುವ ಕೆಲಸ ನಡೆಸುತ್ತಿದ್ದಾರೆ. ಅವರ ಸರ್ಕಾರ ಇದೆ ಎಂದು ಅತಿರೇಕದ ವರ್ತನೆ ತೋರುತ್ತಿದ್ದಾರೆ. ಪಕ್ಷ ಇದನ್ನು ಸಂಘಟನಾತ್ಮಕವಾಗಿ ಎದುರಿಸುತ್ತೆ. ಕುಮಾರಸ್ವಾಮಿ ಅವರು ಮಹಾಭಾರತದ ಶಕುನಿ ಇದ್ದಂತೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES