Monday, September 23, 2024

ಕಬಿನಿ ಜಲಾಶಯದ ನೀರಿನ ಮಟ್ಟ ಹೆಚ್ಚಳ

ಮೈಸೂರು: ಕೇರಳದ ವಯನಾಡು ಮತ್ತು ಕಬಿನಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಮೈಸೂರು ಜಿಲ್ಲೆಯ H.D.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ.

ಜಲಾಶಯದ ಇಂದಿನ ಒಳಹರಿವು 17,184 ಕ್ಯೂಸೆಕ್ ಇದ್ದರೆ ಜಲಾಶಯದಿಂದ 23,000 ಕ್ಯೂಸೆಕ್ ನೀರು ಹೊರಗೆ ಬಿಡಲಾಗುತ್ತಿದೆ. ಕಬಿನಿ ಜಲಾಶಯದ ಗರಿಷ್ಠ ಸಾಮರ್ಥ್ಯ 84 ಅಡಿ ಇದೆ, ಪ್ರಸ್ತುತ ನೀರಿನ ಮಟ್ಟ 83.91 ಅಡಿ ಮುಟ್ಟಿದೆ. ಒಟ್ಟು 19.52 TMCನೀರು ಸಂಗ್ರಹ ಸಾಮರ್ಥ್ಯದ ಕಬಿನಿ ಜಲಾಶಯದಲ್ಲಿ ಇಂದು 19.45 TMC ನೀರು ಸಂಗ್ರಹವಾಗಿದೆ.

ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ಈ ವರ್ಷ ಕಳೆದ 51ವರ್ಷಗಳಲ್ಲಿಯೇ ಅತ್ಯಧಿಕ ಪ್ರಮಾಣದ ಮಳೆ ಸುರಿದಿದೆ. ಕಳೆದ ಜೂನ್ 1ರಿಂದ ಆಗಸ್ಟ್ 31ರ ಅವಧಿಯ ಲೆಕ್ಕಾಚಾರದಲ್ಲಿ ಕರ್ನಾಟಕದಲ್ಲಿ ಸುರಿದಿರುವ ಮಳೆ ಪ್ರಮಾಣವು ಶೇ.22 ರಷ್ಟು ಹೆಚ್ಚಾಗಿದೆ. ಕಾವೇರಿ ಜಲಾನಯನ ಪ್ರದೇಶದ ಎಲ್ಲಾ ಜಲಾಶಯಗಳು ತುಂಬಿದ್ದು, ತಮಿಳುನಾಡಿಗೆ 47 TMC ಅಡಿಯಷ್ಟು ಕಾವೇರಿ ನೀರು ಹರಿದಿದೆ. ಇದೂ ಸಹ ಒಂದು ದಾಖಲೆಯೇ ಆಗಿದೆ. ಕಳೆದ 48 ವರ್ಷಗಳಲ್ಲೇ ಗರಿಷ್ಠ ಮಟ್ಟದ ನೀರು ತಮಿಳುನಾಡಿಗೆ ಹೋಗಿದೆ. ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಾಗಿರುವ ಹಾರಂಗಿ, ಹೇಮಾವತಿ, KRS ಮತ್ತು ಕಬಿನಿ ಡ್ಯಾಂಗಳಿಂದ ಕರ್ನಾಟಕವು ಒಟ್ಟು 114 TMC ಅಡಿ ನೀರು ಸಂಗ್ರಹಿಸಬಹುದಾಗಿದೆ.

RELATED ARTICLES

Related Articles

TRENDING ARTICLES