Saturday, November 23, 2024

ಮಮತಾ ಬ್ಯಾನರ್ಜಿದ್ದು ಉತ್ತರ ಕೊರಿಯಾದಂತೆ ಸರ್ವಾಧಿಕಾರ ಸರ್ಕಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ‘ನಬನ್ನಾ’ಕ್ಕೆ ಮೆರವಣಿಗೆ ಮೂಲಕ ಬೃಹತ್ ಪ್ರತಿಭಟನೆಯ ನಡೆಸುತ್ತಿದ್ದು ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಪೊಲೀಸರು ಲಾಠಿ ಚಾರ್ಜ್​ ಮಾಡಿದ್ದಾರೆ. ಅಲ್ಲದೇ, ಜಲಫಿರಂಗಿಯನ್ನ ಪ್ರತಿಭಟನಾಕಾರರ ಮೇಲೆ ಪ್ರಯೋಗಿಸಿದ್ದಾರೆ.

ಸಿಎಂ ಮಮತಾ ಬ್ಯಾನರ್ಜಿ ಅವರ ಸರ್ಕಾರದ ವಿರುದ್ಧ ಇಂದು ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಬಿಜೆಪಿ ಸಂಸದ ಲಾಕೆಟ್ ಚಟರ್ಜಿ, ರಾಹುಲ್ ಸಿನ್ಹಾ ಸೇರಿದಂತೆ ಹಲವು ಬಿಜೆಪಿ ನಾಯಕರು ಕೊಲ್ಕತ್ತಾದ ಹೌರಾ ಸೇತುವೆ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆಯಲ್ಲಿ ಪೊಲೀಸರು ಬಂಧಿಸಿ ವಾಹನದಲ್ಲಿ ಕರೆದೊಯ್ದರು.

ಇನ್ನು ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಗಳೊಂದಿಗೆ ಘರ್ಷಣೆ ನಡೆಸುತ್ತಿದ್ದಂತೆ ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಬಳಸಿದರು. ಈ ವೇಳೆ ಪ್ರತಿಭಟನಾಕಾರರು ಪೊಲೀಸ್ ಕಾರಿಗೂ ಬೆಂಕಿ ಹಂಚಿದ್ದಾರೆ. ನಂತರ ಮಹಿಳೆಯರು ಸೇರಿದಂತೆ ಹಲವಾರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧನಕ್ಕೂ ಮೊದಲಿಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಸರ್ಕಾರವನ್ನ ಟೀಕಿಸಿದ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅವರ ಜನರ ಬೆಂಬಲವಿಲ್ಲ. ಪಶ್ಚಿಮ ಬಂಗಾಳದಲ್ಲಿ ಉತ್ತರ ಕೊರಿಯಾದಂತೆಯೇ ಸರ್ವಾಧಿಕಾರವನ್ನು ಜಾರಿಗೊಳಿಸುತ್ತಿದ್ದಾರೆ. ಸೋಮವಾರದಿಂದ ಏನು ಮಾಡುತ್ತಿದ್ದೀರಿ ಎಂದು ಪೊಲೀಸರು ಪಾವತಿಸಬೇಕಾಗುತ್ತದೆ. ಬಿಜೆಪಿ ಬರಲಿದೆ ಎಂದು ಅಧಿಕಾರಿ ಎಎನ್‌ಐಗೆ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES