ಬೆಂಗಳೂರು: ಹವಾಮಾನ ಮುನ್ಸೂಚನೆ ಪ್ರಕಾರ ಮುಂದಿನ 3 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದಕ್ಕೆ ಹವಾಮಾನ ಪರಿಸ್ಥಿತಿಗಳಲ್ಲಿನ ಅನಿರೀಕ್ಷಿತ ಬದಲಾವಣೆ ಕಾರಣ ಎಂದು ಇಲಾಖೆ ಹೇಳಿದೆ.
ಹಾಗಾಗಿ ಕರ್ನಾಟಕ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ 3 ದಿನ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆವಿದ್ದು, ಹೀಗಾಗಿ ಮೂರು ಜಿಲ್ಲೆಗಳಲ್ಲಿ ಆರೆಂಜ್ (ತುಂತುರು ಮಳೆ) ಅಲರ್ಟ್ ಘೋಷನೆ ಮಾಡಲಾಗಿದೆ.
ಅದರಂತೆ ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ ಹಾಗೂ ಚಿಕ್ಕಬಳ್ಳಾಪುರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಆಗುವ ಸಂಭವಿದ್ದು, ಎಲ್ಲಾ ಜಿಲ್ಲೆಗಳಿಗೆ ನಾಳೆ ಮಾತ್ರ ಯೆಲ್ಲೋ(ಹಗುರು ಮಳೆ) ಅಲರ್ಟ್ ಘೋಷಣೆ ಮಾಡಿದೆ.