ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬದ ಮೇಲೆ ರಾಮಲಿಂಗಮ್ ಕನ್ಸ್ಟ್ರಕ್ಷನ್ ಕಂಪನಿಯಿಂದ ಲಂಚ ಪಡೆದ ಪ್ರಕರಣ ಕೇಸ್ ದಾಖಲಾಗಿದ್ದು,ಇದರ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಮ್ಮ ಕುಟುಂಬದ ವಿರುದ್ಧ ಮೊದಲಿನಿಂದಲೂ ಷಡ್ಯಂತ್ರ ನಡೆಯುತ್ತಿದ್ದು, ಈ ಹಿಂದೆ ಸದರಿ ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿತ್ತು, ಆದರೂ ಖಾಸಗಿ ವ್ಯಕ್ತಿಯೊಬ್ಬರು ಮತ್ತೆ ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ. ದೇಶದ ಸಂವಿಧಾನ ಮತ್ತು ಕಾನೂನಿನ ಮೇಲೆ ನಮಗೆ ನಂಬಿಕೆ ಇದ್ದು,ಈ ವಿಷಯದ ಬಗ್ಗೆ ನಮ್ಮ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.