ಬೆಂಗಳೂರು: ರಾಜ್ಯದಲ್ಲಿ 21 ದಿನಗಳ ಕಾಲ ಭಾರತ್ ಜೋಡೋ ಯಾತ್ರೆ ನಡೆಯಲಿರುವ ಹಿನ್ನಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಸಮಿತಿ ರಚನೆ ಮಾಡಲಾಗಿದ್ದು, ಈ ಸಮಿತಿಯಲ್ಲಿ ಸಿದ್ದರಾಮಯ್ಯ ಬೆಂಬಲಿಗರನ್ನ ಕಡೆಗಾಣಿಸಿದ್ದು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹೈಕಮಾಂಡ್ ಮಟ್ಟದಲ್ಲಿ ದೂರು ನೀಡಿದ್ರಾ ಎಂಬ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ಇತ್ತೀಚಿಗೆ ಭಾರತ್ ಜೋಡೋ ಯಾತ್ರೆಗೆ ಜನರನ್ನ ಕರೆದುಕೊಂಡು ಬರೋದಕ್ಕೆ ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಆರ್.ವಿ ದೇಶಪಾಂಡೆ ಬಹಿರಂಗವಾಗಿ ಹೇಳಿಕೆ ನೀಡಿದ್ದರು.
ಈ ಎಲ್ಲಾ ಸುದ್ದಿ ನಡೆಯುತ್ತಿರುವ ಬೆನ್ನಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಸಮಿತಿ ರಚನೆ ಮಾಡಿದ್ದು, ಸಿದ್ದರಾಮಯ್ಯ ಅವರ ಬೆಂಬಲಿಗರಲ್ಲಿ ಗುರುತಿಸಿಕೊಂಡಿದ್ದ ಆರ್ವಿ ದೇಶಪಾಂಡೆ ಅವರಿಗೆ ಯಾವುದೇ ಸ್ಥಾನ ನೀಡಿದೆ ಕಡೆಗಣಿಸೋ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಬೆಂಬಲಿಗರಿಗೆ ಒಂದು ಸಂದೇಶ ಜಾರಿ ಮಾಡಿದ್ರಾ ಎಂಬ ಮಾತುಗಳು ಕೇಳಿಬರುತ್ತಿವೆ.