Friday, November 22, 2024

ಬಿಬಿಎಂಪಿಗೆ ಹೈಕೋರ್ಟ್ ಚಾಟಿ

ಬೆಂಗಳೂರು : ಸಿಲಿಕಾನ್​ ಸಿಟಿ ರಸ್ತೆ ಗುಂಡಿಗಳ ಬಗ್ಗೆ ಹೈಕೋರ್ಟ್​ ಬಿಬಿಎಂಪಿಗೆ ತರಾಟೆಗೆ ತೆಗೆದುಕೊಂಡಿದೆ. ನಗರವನ್ನು ಗುಂಡಿ ಮುಕ್ತ ಮಾಡುವಂತೆ ಖಡಕ್ ಸೂಚನೆ ನೀಡಿದೆ.

ನಗರದಲ್ಲಿ ರಸ್ತೆಗಳನ್ನು ಉತ್ತಮ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದು ಮತ್ತು ಅವುಗಳನ್ನು ನಿರ್ವಹಣೆ ಮಾಡುವುದು ಶಾಸನಬದ್ಧ ಸಂಸ್ಥೆಯಾದ ಬಿಬಿಎಂಪಿ ಜವಾಬ್ದಾರಿ. ಗುಂಡಿ ಮುಕ್ತ ರಸ್ತೆ ಹೊಂದುವ ಹಕ್ಕು ನಾಗರಿಕರಿಗಿದೆ. ಸಾಕಷ್ಟು ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿವೆ. ಅದರಿಂದ ದ್ವಿಚಕ್ರ ವಾಹನ ಸವಾರರಿಗೆ ಅಪಾಯವಿದೆ. ಅವರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕಾಗಿರುವುದು ಪಾಲಿಕೆಯ ಕರ್ತವ್ಯವಾಗಿದೆ ಎಂದು ಹೇಳಿತು. ಹೈಕೋರ್ಟ್​ಗೆ ಬಿಬಿಎಂಪಿ ರಸ್ತೆ ದುರಸ್ತಿ ಬಗ್ಗೆ ಮಾಹಿತಿ ನೀಡಿದೆ.

ಇನ್ನು, ಈಗಾಗಲೇ ಮುಖ್ಯ ರಸ್ತೆಗಳಲ್ಲಿನ ಎಲ್ಲ ಗುಂಡಿಗಳನ್ನು ಹಂತ – ಹಂತವಾಗಿ ಮುಚ್ಚಲಾಗುತ್ತಿದೆ. ಇನ್ನೂ 221 ಗುಂಡಿಗಳನ್ನು ಮುಚ್ಚಬೇಕಾಗಿದ್ದು, ಪ್ರಮುಖ ಮತ್ತು ಮುಖ್ಯ ರಸ್ತೆಗಳಲ್ಲಿನ 2,010 ಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಉಳಿದ 221 ಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಆದಷ್ಟು ಬೇಗ ಮುಚ್ಚಲಾಗುವುದು. ನಗರದ 472 ಕಿಲೋ ಮೀಟರ್‌ ಉಪ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ಟೆಂಡರ್‌ ಕರೆಯಲಾಗಿದ್ದು, 2023ರ ಜನವರಿ 31ರೊಳಗೆ ದುರಸ್ತಿಗೊಳಿಸಲಾಗುವುದು ಎಂದು ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿದೆ.

RELATED ARTICLES

Related Articles

TRENDING ARTICLES