ಮೈಸೂರು: ಡಿಗ್ರಿ ಪಡೆದ ಯುವಕರಿಗೆ ಕೆಲಸ ಸಿಗುತ್ತಿಲ್ಲ. ಹೀಗಾಗಿ ಅವರು ಕ್ರೈಂ ದಾರಿ ಹಿಡಿಯುತ್ತಿದ್ದಾರೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಳಪಾಡ್ ಹೇಳಿದ್ದಾರೆ.
ನಗರದಲ್ಲಿಂದು ಡಿಗ್ರಿ ಪಡೆದ ಯುವಕರಿಗೆ ಕೆಲಸ ಸಿಗುತ್ತಿಲ್ಲ. ಹೀಗಾಗಿ ಅವರು ಕ್ರೈಂ ದಾರಿ ಹಿಡಿಯುತ್ತಿದ್ದಾರೆ. ತಪ್ಪಾದ ದಾರಿ ಹೋಗುತ್ತಿದ್ದಾರೆ. ಇದೇ ನಡೆಯುತ್ತಿರುವುದು.ಐಸಿಸಿ ಸಂಘಟನೆ ಅಂತಲ್ಲ. ಯುವಕರು ತಪ್ಪಾದ ದಾರಿ ಹಿಡಿಯುತ್ತಿರುವುದು ಸತ್ಯ.ನಿರುದ್ಯೋಗ ಇರುವ ಕಾರಣ ಯುವಕರು ತಪ್ಪು ದಾರಿ ಹಿಡಿದಿದ್ದಾರೆ. ಇದಕ್ಕೆ ಬಿಜೆಪಿಯೆ ಹೊಣೆಗಾರರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು, ಕೆಲಸ ಇದ್ದರೆ ಯುವಕರಿಗೆ ತಪ್ಪು ದಾರಿಗೆ ತುಳಿಯುವ ಯೋಚನೆ ಬರಲ್ಲ. 2023 ರ ವರೆಗೆ ಯುವಕರು ತಾಳ್ಮೆಯಿಂದ ಇರಿ. ಸುವರ್ಣ ಕಾಲ ಬರುತ್ತೆ. ತಪ್ಪು ದಾರಿಗೆ ಹೋಗಬೇಡಿ.ಐಸಿಸಿ ಸಂಪರ್ಕದಲ್ಲಿ ಇರೋರರನ್ನು ಭಾರತದಲ್ಲಿ ಇಟ್ಟು ಕೊಳ್ಳಬೇಡಿ. ಅವರಿಗೆ ಗಲ್ಲು ಶಿಕ್ಷೆ ಕೊಡಿ ಎಂದರು.
ಅದಲ್ಲದೇ, ಬೆಂಗಳೂರಿನಲ್ಲಿ ಒತ್ತುವರಿ ತೆರವಿಗೆ ಕಾಂಗ್ರೆಸ್ ವಿರೋಧವಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ಗೂ ಒತ್ತುವರಿ ತೆರವಿಗೂ ಸಂಬಂಧವಿಲ್ಲ. ಬಿಜೆಪಿ ಕಾನೂನು ಪ್ರಕಾರ ಕ್ರಮ ತೆಗೆದು ಕೊಳ್ಳಲಿ. ಒತ್ತುವರಿ ತೆರವು ಮಾಡುವ ಮುನ್ನಾ ವೈಜ್ಞಾನಿಕವಾಗಿ ವರದಿ ತಯಾರಿಸಿ. ಜಸ್ಟ್ ಫ್ಹ್ಲಾಡ್ ಬಂದ ತಕ್ಷಣ ಆ ಕಟ್ಟಡ ಹೊಡೆಯಿರಿ, ಈ ಕಟ್ಟಡ ಹೊಡೆಯಿರಿ ಎಂದರೆ ಹೇಗೆ ? ಪಕ್ಷ ಅಂದ ಮೇಲೆ ಅದು ಮನೆ ಇದ್ದಂತೆ.ಮಾತು ಬರುತ್ತವೆ. ನಾವೇ ಮನೆಯೊಳಗೆ ಕೂತು ಮಾತಾಡಿ ಕೊಂಡು ಸರಿ ಮಾಡಿ ಕೊಳ್ತಿವಿ. ಯಾತ್ರೆಯ ಸಂಘಟನೆ ವಿಚಾರದಲ್ಲಿ ಯಾರು ತಾರತಮ್ಯ ಮಾಡುವಂಗಿಲ್ಲ. ಯಾರಿ ತುಟಿಕ್ ಪಿಟಿಕ್ ಅನ್ನೋ ಆಗಿಲ್ಲ ಎಂದು ಮೈಸೂರಿನಲ್ಲಿ ಮಹಮ್ಮದ್ ನಲಪಾಡ್ ಹೇಳಿದ್ದಾರೆ.