ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತರು ಮುಂದಾಗಿದ್ದಾರೆ.
ಇಂದು ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬೃಹತ್ ರ್ಯಾಲಿ ನಡೆಯಲಿದ್ದು, ಬೆಳಗ್ಗೆ 11 ಗಂಟೆಯಿಂದ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ರ್ಯಾಲಿ ನಡೆಯಲಿದೆ. ಹೋರಾಟದಲ್ಲಿ 1ಲಕ್ಷಕ್ಕೂ ಹೆಚ್ಚು ರೈತರು ಭಾಗಿಯಾಗುವ ಸಾಧ್ಯತೆ ಇದೆ.
ರೈತರ ಬೇಡಿಕೆಗಳೇನು..?
1. ಪ್ರಸಕ್ತ ಸಾಲಿನ ಕಬ್ಬಿನ ದರ ಕನಿಷ್ಠ 3,500 ರೂ. ನಿಗದಿಯಾಗಬೇಕು
2. ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಖಾಸಗೀಕರಣ ಕಾಯ್ದೆ ಕೈಬಿಡಬೇಕು
3. ರೈತರ ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಜಾರಿಗೊಳಿಸಬೇಕು
4. ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯಂತೆ ಖಾತರಿ ಬೆಲೆ ಜಾರಿಯಾಗಬೇಕು
5. ಕೃಷಿ ಕಾಯ್ದೆ ವಿರೋಧಿಸಿ ಹೋರಾಟ ಮಾಡಿದ್ದ ರೈತರಿಗೆ ಪರಿಹಾರ ಕೊಡಬೇಕು
6. ಮಳೆ ಹಾನಿಯಿಂದಾದ ಎಲ್ಲ ಬೆಳೆಗಳಿಗೂ ಬೆಳೆ ವಿಮೆ ಸಿಗುವಂತಾಗಬೇಕು
7. ರೈತರ ಆತ್ಮಹತ್ಯೆ ಪರಿಗಣಿಸಿ ದೇಶದ ರೈತರ ಸಾಲಮನ್ನಾ ಆಗಬೇಕು
8. ಕೃಷಿ ಉತ್ಪನ್ನಗಳ ಮೇಲೆ ವಿಧಿಸಿರುವ GST ರದ್ದುಗೊಳಿಸಬೇಕು
9. ಫಸಲ್ ಭೀಮಾ ಬೆಳೆ ವಿಮೆ ಯೋಜನೆಯ ಮಾನದಂಡ ಬದಲಾಗಬೇಕು
10. ಅತಿವೃಷ್ಟಿ ಸಮಸ್ಯೆಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಸಾಲ ವಸೂಲಾತಿ ನಿಲ್ಲಬೇಕು
11. ರಾಜ್ಯದಲ್ಲಿ ಜಾರಿ ಮಾಡಿರುವ APMC ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಬೇಕು