ಜೈಪುರ: ಬುಲೆಟ್ಗೆ ಬುಲೆಟ್ನಿಂದಲೇ ಉತ್ತರ ಕೊಡಬೇಕು ಅಂತ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೈಪುರದಲ್ಲಿ ಹೇಳಿದ್ದಾರೆ. ಜೈಪುರದಲ್ಲಿ ನಡೆಯುತ್ತಿರುವ ಶಕ್ತಿ ಕೇಂದ್ರ ಸಮ್ಮೇಳನದಲ್ಲಿ ಪುಲ್ವಾಮಾ ಉಗ್ರರ ದಾಳಿ ಬಗ್ಗೆ ಮಾತನಾಡಿದ ಅಮಿತ್ ಶಾ, “ಪಾಕಿಸ್ತಾನದ ಹೇಡಿತನಕ್ಕೆ ನಮ್ಮ ಸೈನಿಕರು ತಕ್ಕ ಉತ್ತರ ನೀಡುತ್ತಾರೆ. ಹುತಾತ್ಮ ಯೋಧರ ಕುಟುಂಬದ ಜೊತೆ ನಾವಿದ್ದೇವೆ” ಅಂತ ಹೇಳಿದ್ದಾರೆ.
ಜಮ್ಮುಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಅಮಿತ್ ಶಾ, “ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಯೋಧರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಪಾಕಿಸ್ತಾನಕ್ಕೆ ಸರಿಯಾದ ಪಾಠ ಕಲಿಸಲಿದೆ. ಬಿಜೆಪಿ ನೇತೃತ್ವದ ಸರ್ಕಾರ ಪಾಕಿಸ್ತಾನಕ್ಕೆ ಸರಿಯಾದ ಉತ್ತರ ನೀಡಲಿದೆ” ಅಂತ ಹೇಳಿದ್ದಾರೆ.