Tuesday, November 5, 2024

ಮತ್ತೊಂದು ದಾಖಲೆ ಬರೆದ ಕೊಹ್ಲಿ

ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಸೌತ್ ಆಫ್ರಿಕಾ ವಿರುದ್ಧದ 2ನೇ ಪಂದ್ಯದಲ್ಲಿ ಅಕ್ಷರಶಃ ಅಬ್ಬರಿಸಿದ್ದರು. 28 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಅಜೇಯ 49ರನ್​ ಬಾರಿಸಿದ್ದರು.

ಇನ್ನು, ಭರ್ಜರಿ ಬ್ಯಾಟಿಂಗ್​ನೊಂದಿಗೆ ಇದೀಗ ಕಿಂಗ್ ಕೊಹ್ಲಿ ವಿಶೇಷ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಸೌತ್ ಆಫ್ರಿಕಾ ವಿರುದ್ಧ 49ರನ್​ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 11 ಸಾವಿರ ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

2007ರಿಂದ 2022ರವರೆಗೆ IPL ಹಾಗೂ ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿರುವ ಕೊಹ್ಲಿ ಒಟ್ಟು 337 ಇನಿಂಗ್ಸ್​ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ವೇಳೆ 6 ಶತಕ ಹಾಗೂ 81 ಅರ್ಧಶತಕಗಳನ್ನೂ ಕೂಡ ವಿರಾಟ್ ಕೊಹ್ಲಿ ಸಿಡಿಸಿದ್ದರು. ಸದ್ಯ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ದಾಖಲೆ ವೆಸ್ಟ್ ಇಂಡೀಸ್​ನ ಸ್ಪೋಟಕ ಬ್ಯಾಟ್ಸ್​ಮನ್ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಸದ್ಯ 11,030 ರನ್ ಬಾರಿಸುವ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

RELATED ARTICLES

Related Articles

TRENDING ARTICLES