ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಗೆ ಎಐಸಿಸಿ ಅಧ್ಯಕ್ಷ ಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜೆಪಿ ಭವನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದರು.
ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಯಾರು ಇಲ್ಲದ ಸಂದರ್ಭದಲ್ಲಿ, ಪಕ್ಷ ನೆಲ ಕಚ್ಚಿರುವ ವೇಳೆ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಅಧ್ಯಕ್ಷ ಸ್ಥಾನಕ್ಕೆ ಕೂರಿಸಲು ಹೊರಟಿದ್ದಾರೆ. ಪಕ್ಷ ಸದೃಡವಾಗಿದ್ದಾಗಲೇ ಲೆಕ್ಕಕ್ಕೆ ತೆಗೆದುಕೊಳ್ಳಲಿಲ್ಲ. ಒಂದು ವರ್ಗದ ಮತಗಳು ಪರಿವರ್ತನೆ ಆಗುತ್ತವೆ ಅಂತ ಲೆಕ್ಕಾಚಾರದಲ್ಲಿ ಈಗ ಅಧ್ಯಕ್ಷ ಸ್ಥಾನ ನೀಡುತ್ತಿದ್ದಾರೆ ಎಂದರು.
ಮಲ್ಲಿಕಾರ್ಜುನ್ ಖರ್ಗೆ ಮುಂದೆ ಅವರಿಗೆ ಏನು ಪ್ರಾಮುಖ್ಯತೆ ಸಿಗುತ್ತದೆ ಅನ್ನೋದು ಮುಖ್ಯ ಅಲ್ವಾ. ಅವರು ಅಧ್ಯಕ್ಷರಾಗುವುದರಿಂದ ಏನ್ ಪ್ರಭಾವ ಬೀರುತ್ತದೆ ಎಂಬುದನ್ನ ಈಗಲೇ ಚರ್ಚೆ ಮಾಡೋದು ಬೇಡ. ಏನು ಅಂತ ಇನ್ನು ಆರು ತಿಂಗಳು ಇದ್ದಾಗ ಗೊತ್ತಾಗುತ್ತದೆ ಎಂದರು.
ಅಂತೆಯೇ, ನಿನ್ನೆ ತೆಲಂಗಾಣ ಪ್ರವಾಸದ ಬಗ್ಗೆ ಮಾತನಾಡಿದ ಹೆಚ್ಡಿಕೆ, ನಮ್ಮ ಶಾಸಕರ ಜೊತೆ ತೆಲಂಗಾಣ ಸಿಎಂ ಸುದೀರ್ಘವಾಗಿ ಚರ್ಚೆ ಮಾಡಿದ್ದಾರೆ. ಟಿಆರ್ಎಸ್ ಪಾರ್ಟಿ ಈಗ ಭಾರತ್ ರಾಷ್ಟೀಯ ಪಾರ್ಟಿ ಆಗಿದೆ. ಇದರ ಜೊತೆ ನಾವು ಕೈ ಜೋಡಿಸುತ್ತೇವೆ. 2023ರ ಚುನಾವಣೆಯಲ್ಲಿ ನಾವು ಜೊತೆಯಲ್ಲಿ ಇರುತ್ತೇವೆ. ನಾವು ಬಿಆರ್ಎಸ್ ಪಾರ್ಟಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ. ಚುನಾವಣೆಯಲ್ಲಿ ನಮ್ಮ ಬೆಂಬಲಕ್ಕೆ ಬಿಆರ್ಎಸ್ ಪಕ್ಷ ಇರಲಿದೆ ಎಂದರು.