ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ಹೋರಾಟ ನಡೀತಾ ಇತ್ತು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡಬೇಕು ಪ್ರಗತಿಪರರು ಹೋರಾಟ ನಡೆಸಿದ್ದರು. ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಕೊಟ್ಟಿದ್ದಾರೆ. ಈ ಸಮುದಾಯದ ಹಿರಿಯ ಸಚಿವನಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಸಾಮಾಜಿಕ ನ್ಯಾಯ ಎಂಬುದು ಬೊಮ್ಮಾಯಿಗೆ ರಕ್ತಗತವಾಗಿ ಬಂದಿದೆ. 241 ದಿನ ಸ್ವಾಮೀಜಿಗಳು ಸತ್ಯಾಗ್ರಹ ಮಾಡಿದ್ದಾರೆ. ಇದರ ಪ್ರತಿಫಲವಾಗಿ ಇಂದು ಮೀಸಲಾತಿ ಒದಗಿಸಲು ಸರ್ಕಾರ ಮುಂದಾಗಿದೆ ಎಂದರು.