ಬೆಂಗಳೂರು: ಚುನಾವಣೆ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪದ ಮೇಲೆ ಬಿಜೆಪಿ ಶಾಸಕನಿಗೆ 2 ತಿಂಗಳು ಜೈಲು ಹಾಗೂ 10 ಸಾವಿರ ರೂ ದಂಡ ವಿಧಿಸಿ ಕೋರ್ಟ್ ತೀರ್ಪು ಆದೇಶ ನೀಡಿದೆ.
ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರು 2018 ರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣೆ ಆಯೋಗಕ್ಕೆ ತಮ್ಮ ತಪ್ಪು ಮಾಹಿತಿಯನ್ನ ತಪ್ಪು ಆರೋಪ ಕೇಳಿಬಂದಿತ್ತು.
ಈ ಹಿನ್ನಲೆಯಲ್ಲಿ ಇಂದು ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ವಿಚಾರಣೆ ನಡೆಸಿ ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
ಶಾಸಕರ ವಿರುದ್ಧ ಹೆಚ್.ಜಿ ಪ್ರಶಾಂತ್ ಎಂಬುವರು ದೂರು ದಾಖಲಿಸಿದ್ದರು. 2 ಕ್ರಿಮಿನಲ್ ಪ್ರಕರಣಗಳ ಮಾಹಿತಿ ಮುಚ್ಚಿಟ್ಟ ಆರೋಪ ಹಾಗೂ ಕಂಪನಿಯ ಹುದ್ದೆಯ ಮಾಹಿತಿ ಮುಚ್ಚಿಟ್ಟ ಆರೋಪದ ಮೇಳೆ ಜನಪ್ರತಿನಿಧಿಗಳ ಕಾಯ್ದೆ ಸೆ.125 ಎ ಅಡಿ ಆರೋಪ ಸಾಬೀತು ಆಗಿದೆ.