ಚಿಕ್ಕಮಗಳೂರು : ವರ್ಷಕ್ಕೊಮ್ಮೆ ದರ್ಶನ ಕೊಡೋ ಬೆಟ್ಟದ ತಾಯಿ ದೇವಿರಮ್ಮನ ದರ್ಶನ ಪಡೆಯೋಕೆ ಭಕ್ತಸಾಗರವೇ ಹರಿದು ಬಂದಿದೆ.
ಚಿಕ್ಕಮಗಳೂರಿನ ಮಲ್ಲೇನಹಳ್ಳಿ ದೇವಿರಮ್ಮನ ಜಾತ್ರೆ ಅದ್ದೂರಿಯಾಗಿ ನಡೆಯುತ್ತಿದೆ. ವರ್ಷಕ್ಕೊಮ್ಮೆ ದರ್ಶನ ಕೊಡೋ ಬೆಟ್ಟದ ತಾಯಿಯನ್ನ ನೋಡೋಕೆ ಈ ವರ್ಷ ನಿರೀಕ್ಷೆಗೂ ಮೀರಿದ ಭಕ್ತವೃಂದ ಆಗಮಿಸಿದೆ.
ಕಳೆದ ಎರಡ್ಮೂರು ವರ್ಷಗಳಿಂದ ಮಳೆ ಹಾಗೂ ಕೊರೋನಾದಿಂದ ಭಕ್ತರ ಆಗಮನ ಕಡಿಮೆ ಇತ್ತು. ಆದರೆ, ಈ ವರ್ಷ ಮಧ್ಯರಾತ್ರಿಯಿಂದಲೇ ಬೆಟ್ಟ ಹತ್ತಿದ ಭಕ್ತರ ಸಂಖ್ಯೆ ಅಂದಾಜು 80 ಸಾವಿರ ದಾಟಿದೆ. ಇಲ್ಲಿ ಹರಕೆ ಕಟ್ಟಿಕೊಂಡೋರು ಬೆಟ್ಟ ಹತ್ತುವಾಗ ಎಷ್ಟೇ ಕಷ್ಟವಾದ್ರು, ಅವರ ಶಕ್ತಿಗನುಸಾರವಾಗಿ ಸೌದೆಯನ್ನ ಹೊತ್ತೊಯ್ಯುತ್ತಾರೆ. ಇದರ ಜೊತೆಗೆ ಸೀರೆ, ತುಪ್ಪ, ಬೆಣ್ಣೆ, ಕಾಯಿ, ಬಾಳೆಹಣ್ಣನ್ನ ದೇವಿಗೆ ಸಮರ್ಪಿಸ್ತಾರೆ.