ಬೆಂಗಳೂರು: ದಿವಂಗತ ಪುನೀತ್ ರಾಜ್ಕುಮಾರ್ ಪರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಸ್ವೀಕರಿಸಲಿರುವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸೂಪರ್ ಸ್ಟಾರ್ ರಜನಿ ಕಾಂತ್ ಆಗಮಿಸಲಿದ್ದಾರೆ.
ಕರ್ನಾಟಕ ರತ್ನ ಪ್ರಶಸ್ತಿ ಕಾರ್ಯಕ್ರಮಕ್ಕೆ ನಟ ರಜನಿಕಾಂತ್ ಅವರನ್ನ ರಾಜ್ಯ ಸರ್ಕಾರ ಆಹ್ವಾನಿಸಿತ್ತು. ಈ ಬಗ್ಗೆ ಇಂದು ಸಿಎಂಗೆ ಪತ್ರ ಬೆರೆದು ರಜನಿಕಾಂತ್ ಅವರು ದೃಢಪಡಿಸಿದ್ದಾರೆ. ಇನ್ನು ಈ ಸಮಾರಂಭಕ್ಕೆ ಪುನೀತ್ ಅವರ ಕುಟುಂಬಸ್ಥರಿಗೆ ಪ್ರಶಸ್ತಿ ನೀಡಲು ಉತ್ಸುಕನಾಗಿದ್ದೇನೆ ಎಂದಿದ್ದಾರೆ.
ಇನ್ನು ಕರ್ನಾಟಕ ಸರ್ಕಾರದ ಆಹ್ವಾನ ಮನ್ನಿಸಿ ಕಾರ್ಯಕ್ರಮಕ್ಕೆ ಬರುತ್ತಿದ್ದೇನೆ. ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಕ್ಕೆ ರಜನಿ ಕಾಂತ್ ಅಭಿನಂದನೆ ತಿಳಿಸಿದರು.
ಕರ್ನಾಟಕ ರತ್ನ ಪ್ರಶಸ್ತಿ ಸಮಾರಂಭ ನ.1ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಲಿದೆ. ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತೆಲುಗು ನಟ ಜೂನಿಯರ್ ಎನ್ಟಿಆರ್ ಬರಲಿದ್ದಾರೆ.