ಬೆಂಗಳೂರು; 2016ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿರುವ ವಿಡಿಯೋ ಶೇರ್ ಮಾಡಿ ಮಾಜಿ ಸಿಎಂ ಸಿದ್ದರಾಮಯ್ಯ ಮೋದಿ ಅವರ ಕಾಲು ಎಳೆದಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಕಾಲದಲ್ಲಿ ಕೊಲ್ಕೊತ್ತಾದ ಮೇಲುಸೇತುವೆ ಕುಸಿದದ್ದು ಬಂಗಾಳಕ್ಕೆ ದೇವರು ಕಳಿಸಿದ್ದ ಸಂದೇಶ ಎನ್ನುವುದಾದರೆ, ಈಗ ಚುನಾವಣಾ ಕಾಲದಲ್ಲಿ ಗುಜರಾತ್ ತೂಗು ಸೇತುವೆ ಕುಸಿದಿರುವುದು ದೇವರು ಯಾರಿಗೆ ನೀಡಿರುವ ಸಂದೇಶ ನರೇಂದ್ರ ಮೋದಿ ಅವರೇ ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.
ನಿನ್ನೆ ಗುಜರಾತ್ನ ಮೊರ್ಬಿಯಲ್ಲಿ ಮಚು ನದಿಗೆ ಅಡ್ಡವಾಗಿ ಕಟ್ಟಿರುವ ತೂಗು ಸೇತುವೆ ಕುಸಿದು ಸುಮಾರು 134 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೆ ಈಗಾಗಲೇ 177 ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.
ಚುನಾವಣಾ ಕಾಲದಲ್ಲಿ ಕೊಲ್ಕೊತ್ತಾದ ಮೇಲುಸೇತುವೆ ಕುಸಿದದ್ದು
ಬಂಗಾಳಕ್ಕೆ ದೇವರು ಕಳಿಸಿದ್ದ ಸಂದೇಶ ಎನ್ನುವುದಾದರೆ,ಈಗ ಚುನಾವಣಾ ಕಾಲದಲ್ಲಿ ಗುಜರಾತ್
ತೂಗು ಸೇತುವೆ ಕುಸಿದಿರುವುದು ದೇವರು ಯಾರಿಗೆ ನೀಡಿರುವ ಸಂದೇಶ @narendramodi ಅವರೇ?#GujaratBridgeCollapse pic.twitter.com/XZv9VgQD0h— Siddaramaiah (@siddaramaiah) October 31, 2022