ಬೆಂಗಳೂರು: 67 ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ, ಖಾಸಗಿ ಶಾಲಾ ಒಕ್ಕೂಟ ರುಪ್ಸಾ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ. ಕನ್ನಡ ಮಾಧ್ಯಮ ಶಾಲೆಗಳನ್ನ ಅನುದಾನಕ್ಕೆ ಒಳಪಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕನ್ನಡ ಮಾಧ್ಯಮ ಶಾಲೆಗಳಲ್ಲಿ ಲಕ್ಷಾಂತರ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಕಡಿಮೆ ಸಂಬಳಕ್ಕೆ ಶಿಕ್ಷಕರು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಕನ್ನಡ ಮಾಧ್ಯಮ ಶಾಲೆ ಉಳಿವಿಗಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ.
1995 ರಿಂದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಸಿಗದೆ ನೂರಾರು ಶಾಲೆಗಳು ಮುಚ್ಚಿವೆ. ಹೀಗೆ ಮುಂದುವರಿದ್ರೆ ಕನ್ನಡ ಶಾಲೆಗಳು ಶಾಶ್ವತವಾಗಿ ಮುಚ್ಚಲಿವೆ. ಮಾತೃ ಭಾಷೆ ಕನ್ನಡಕ್ಕೆ ಹೆಚ್ಚು ಮನ್ನಣೆ ಸಿಗಬೇಕು. ಈ ಬಗ್ಗೆ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡು ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಅನುದಾನ ಬಿಡುಗಡೆ ಮಾಡುವಂತೆ, ಸರ್ಕಾರಕ್ಕೆ ಪತ್ರ ಬರೆದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮನವಿ ಮಾಡಿದ್ದಾರೆ.