ಬೆಂಗಳೂರು: ರಾಜ್ಯದಲ್ಲಿನ ಪ್ರಾಥಮಿಕ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಇನ್ಮುಂದೆ ಧ್ಯಾನ ಕಡ್ಡಾಯ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳ ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಹಾಗೂ ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ಧ್ಯಾನ ಅಗತ್ಯವಾಗಿದೆ.
ಧ್ಯಾನದಿಂದ ವಿದ್ಯಾರ್ಥಿಗಳಿಗೆ ಚುರುಕು, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಾಕಾರಿಯಾಗುತ್ತದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಧ್ಯಾನ ಮಾಡಿಸಲಾಗುತ್ತಿದೆ. ಇನ್ಮುಂದೆ ರಾಜ್ಯದಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸುಮಾರು 10 ನಿಮಿಷ ಧ್ಯಾನ ಮಾಡಿಸುವಂತೆ ಶಿಕ್ಷಣ ಇಲಾಖೆಗೆ ಸಚಿವರು ಸೂಚನೆ ನೀಡಿದ್ದಾರೆ.
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸುವುದರಿಂದ ಅವರ ಮಾನಸಿಕ ತನಿದಿಂದ ಹೋಗಿ ಪೂರ್ಣ ಪ್ರಮಾಣದಲ್ಲಿ ಚಟುವಟಿಕೆಗಳಿಂದ ಎಲ್ಲ ವಿದ್ಯಾರ್ಥಿಗಳ ಜತೆಗೆ ತೊಡಗಿಸಿಕೊಂಡಿರುತ್ತಾರೆ. ಹೀಗಾಗಿ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು 10 ಸಮಯ ನಿಗದಿಪಡಿಸಿ ಕ್ರಮಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.