ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇನ್ನೂ 3 ದಿನ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಮೈಕೊರೆಯುವ ಚಳಿಯ ತೀವ್ರಯಿಂದ ಜನರು ಗಢಗಢನೆ ನಡುಗುವಂತಾಗಿದ್ದು , ತಾಪಮಾನದಲ್ಲಿಯೂ ವ್ಯತ್ಯಾಸಗಳಾಗುವ ಸಾಧ್ಯತೆ ಇದೆ. ಇಂದಿನಿಂದ ನ.7ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ , ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದಿನಿಂದ ನ.7ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಸುರಿದ ಮಳೆಗೆ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು. ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.