ಕಲಬುರ್ಗಿ: ಕಳೆದೊಂದು ತಿಂಗಳಿನಿಂದ ಸಿಎಂ ಬಸವರಾಜ್ ಬೊಮ್ಮಾಯಿ ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು ಕಲಬುರಗಿ ಜಿಲ್ಲೆಯಲ್ಲಿ ಮೂರನೇ ಬಾರಿ ಪ್ರವಾಸ ಕೈಗೊಂಡಿದ್ದಾರೆ. ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಗೊಳಪಡುವ ಮಡಿಯಾಳ ತಾಂಡಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವೇಕ ಯೋಜನಡೆಯಡಿ ರಾಜ್ಯದಲ್ಲಿ 7600 ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯಕ್ಕೆ ಅಡಿಗಲ್ಲು ನೆರವೇರಿಸಿದರು.
ನಂತರ ವೇದಿಕೆ ಮೇಲೆ ಶಾಲಾ ಮಕ್ಕಳಿಗೆ ಸಿಹಿ ತಿನ್ನಿಸಿ ನನಗೆ ಹಾರಾ ತೂರಾಯಿ ಏನು ಬೇಡ ಅಂತಾ ಹೇಳುವ ಮೂಲಕ ನಾನು ಕಾಮನ್ ಮ್ಯಾನ್ ಸಿಎಂ ಎಂದು ಮತ್ತೊಮ್ಮೆ ಸಾಬೀತುಪಡಿಸಿದರು.
ಇನ್ನೂ ವಿವೇಕ ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯಾಗುತ್ತಿದ್ದು, ಇದು ಕೆಲವೇಡೆ ಅಪಸ್ವರ ಕೇಳಿ ಬರುತ್ತಿದೆ. ಇನ್ನೂ ಇದೇ ಸಮಾರಂಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿಯಾಗಿದ್ದು, ಪ್ರತಿವರ್ಷ ರಾಜ್ಯದಲ್ಲಿ ಎಂಟು ಸಾವಿರ ಕೊಠಡಿಗಳ ನಿರ್ಮಾಣ ಮತ್ತು 15000 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗ್ತಿದ್ದು, ಇದರ ಜೊತೆಗೆ ರಾಜ್ಯದಲ್ಲಿ 4000 ಅಂಗನವಾಡಿ ನಿರ್ಮಾಣದ ಜೊತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ 1500 ಅಂಗನವಾಡಿ ಕೇಂದ್ರ ಸ್ಥಾಪನೆ ಮಾಡಲಾಗ್ತಿದೆ ಅಂತಾ ಸಿಎಂ ಬೊಮ್ಮಾಯಿ ಹೇಳಿದರು.
ಮುಂದಿನ ಬಾರಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಹಂತ ಹಂತವಾಗಿ ಎಲ್ಲಾ ಯೋಜನೆಗಳನ್ನ ಜಾರಿಗೆ ತರಲಾಗ್ತಿದೆ ಎಂದರು.