ಬೆಂಗಳೂರು: ಮುಂಬರುವ 2023 ವಿಧಾನಸಭಾ ಚುನಾವಣೆ ಕಾಂಗ್ರೆಸ್ ಟಿಕೆಟ್ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ ಮಾಡಿ ರಾಜ್ಯ ಕಾಂಗ್ರೆಸ್ ಆದೇಶಿಸಿದೆ.
ಕಾಂಗ್ರೆಸ್ನಿಂದ ಸ್ಪರ್ಧೆ ಮಾಡುವ ಅಭ್ಯರ್ಥಿಗಳು ತಮ್ಮ ಟಿಕೆಟ್ಗಾಗಿ ಕಪಿಸಿಸಿ(ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ) ಗೆ ಅರ್ಜಿ ಸಲ್ಲಿಸಬೇಕೆಂದು ಇತ್ತೀಚಿಗೆ ಡಿ.ಕೆ ಶಿವಕುಮಾರ್ ಅವರು ಆದೇಶಿಸಿದ್ದರು. ಈ ಹಿನ್ನಲೆಯಲ್ಲಿ ಸುಮಾರು 1000 ಕ್ಕೂ ಹೆಚ್ಚು ಅರ್ಜಿಗಳು ಈ ವರೆಗೂ ಕಾಂಗ್ರೆಸ್ಗೆ ಅಭ್ಯರ್ಥಿಗಳು ಅರ್ಜಿ ಹಾಕಿದ್ದಾರೆ. ಇದನ್ನ ಕಾಂಗ್ರೆಸ್ ಹೈಕಮಾಂಡ್ ಗಮನಿಸಿ ಟಿಕೆಟ್ ಘೋಷಣೆ ಮಾಡಲಿದೆ.
ಈ ಹಿನ್ನಲೆಯಲ್ಲಿ ನವೆಂಬರ್ 05 ರಿಂದ 15 ವರೆಗೆ ಸಲ್ಲಿಸಬೇಕೆಂದ ಮೇಲೆ ಇಂದು ಅರ್ಜಿ ಸಲ್ಲಿಸಲು ಕೊನೆಯದಿನ ಆಗಿದ್ದರಿಂದ ಹಲವರು ಕಾಂಗ್ರೆಸ್ಗೆ ಅರ್ಜಿ ಸಲ್ಲಿಸಲಾಗಿಲ್ಲ. ಹೀಗಾಗಿ ರಾಜ್ಯ ಕಾಂಗ್ರೆಸ್ ನವೆಂಬರ್ 21 ರವರೆಗೆ ಅರ್ಜಿ ಅವಧಿ ವಿಸ್ತರಣೆ ಮಾಡಿ ಸೂಚನೆ ಹೊರಡಿಸಿದೆ.
ಈವರೆಗೂ ಕಾಂಗ್ರೆಸ್ ನ ಘಟಾನುಘಟಿಗಳೇ ಇನ್ನೂ ಅರ್ಜಿ ಹಾಕಿಲ್ಲ. 30 ಕ್ಕೂ ಹೆಚ್ಚು ಹಾಲಿ ಶಾಸಕರು ಅರ್ಜಿ ಹಾಕಿಲ್ಲ. ಹಾಗಾಗಿಯೇ ನವೆಂಬರ್ 21 ರವರೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ತಿಳಿಸಿದೆ.