ಬೆಂಗಳೂರು : ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾತಾವರಣದಲ್ಲಿ ಚಳಿ-ಮಳೆ-ಬಿಸಿಲಿನ ಏರಿಳಿತ ಮುಂದುವರಿದಿದೆ, ಸದ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಸಂಜೆ ನಂತರ ಒಂದೆರಡು ಕಡೆಗಳಲ್ಲಿ ಜಿಟಿ ಜಿಟಿ ಇಲ್ಲವೇ ಹಗುರವಾಗಿ ಮಳೆ ಬೀಳುವ ಸಾಧ್ಯತೆ ಇದೆ.
ಇನ್ನು, ಬೆಂಗಳೂರು ಅಷ್ಟೇ ಅಲ್ಲ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಬೆಂ,ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಕೂಡ ಮಳೆ ಸಾಧ್ಯತೆ ಇದೆ.