Thursday, December 26, 2024

ದಾಳಿ ಬಗ್ಗೆ ಮಾಹಿತಿ ನೀಡ್ಬೇಕಿತ್ತಂತೆ : ಪ್ರಧಾನಿ ವಿರುದ್ಧ ರಾಹುಲ್​ ವಾಗ್ದಾಳಿ

ನವದೆಹಲಿ : ಪಾಕಿಸ್ತಾನದ ಯುದ್ಧ ವಿಮಾನ ಎಫ್​-16 ಹೊಡೆದುರುಳಿಸಿದ ಬಗ್ಗೆ ತಮಗೆ ಮಾಹಿತಿ ನೀಡಬೇಕಿತ್ತು ಅಂತ ಕೇಂದ್ರಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.
ದೆಹಲಿಯಲ್ಲಿ ನಡೆದ 21 ರಾಜಕೀಯ ಪಕ್ಷಗಳ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ಗಾಂಧಿ ಕೇಂದ್ರ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.
‘ಎಫ್​-16 ಹೊಡೆದುರುಳಿಸಿದ ಬಗ್ಗೆ ಮಾಹಿತಿ ನೀಡ್ಬೇಕಿತ್ತು. ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಸಬೇಕಿತ್ತು. ಸೇನಾಶಕ್ತಿಯನ್ನು ರಾಜಕೀಯಕ್ಕಾಗಿ ಬಳಸುತ್ತಿದ್ದಾರೆ. ಯೋಧರ ತ್ಯಾಗವನ್ನ ರಾಜಕೀಯಕ್ಕೆ ಬಳಸುತ್ತಿದ್ದಾರೆ’ ಎಂದು ಟೀಕಿಸಿದರು.

RELATED ARTICLES

Related Articles

TRENDING ARTICLES