ಧಾರವಾಡ : 10 ಮುಸ್ಲಿಂ ಶಾಲೆ ತೆರೆಯಲು ಸರ್ಕಾರ ನೀಡಿದ ಆದೇಶಕ್ಕೆ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಲಿದಾನವಾದರೂ ಸರಿ ಮುಸ್ಲಿಂ ಕಾಲೇಜ್ ಸ್ಥಾಪನೆಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ತಿಳಿಸಿದರು. ಹಿಜಾಬ್ ಸಲುವಾಗಿ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡುವುದು ತಪ್ಪು. ಮುಸ್ಲಿಂ ತುಷ್ಟೀಕರಣ ಮಾಡಿ ಕಾಂಗ್ರೆಸ್ ತನ್ನ ನೆಲೆ ಕಳೆದುಕೊಂಡಿದೆ.
ಸರ್ಕಾರ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದರೆ ಹಿಂದೂ ಸಂಘಟನೆಗಳಿಂದ ರಾಜ್ಯದಾಧ್ಯಂತ ಪ್ರತಿಭಟನೆ ನಡೆಸೋದಾಗಿ ಎಚ್ಚರಿಕೆಯನ್ನು ನೀಡಿದ್ರು. ಮುಸ್ಲಿಂ ಕಾಲೇಜು ಸ್ಥಾಪನೆ ಆದೇಶವನ್ನು ಕೂಡಲೇ ಕೈ ಬಿಡಬೇಕು ಎಂದು ಹೇಳಿದರು.