ಮೈಸೂರು : ಸಂಸದ ಪ್ರತಾಪ್ ಸಿಂಹ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಪರ ಬ್ಯಾಟಿಂಗ್ ನಡೆಸಿದ್ದಾರೆ. ಬಿಎಸ್ವೈ ಹೇಳಿಕೆಯಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಉಗ್ರ ನೆಲೆಗಳ ಮೇಲೆ ಭಾರತ ನಡೆಸಿದ ದಾಳಿ ರಾಜ್ಯದಲ್ಲಿ 22 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ನೆರವಾಗಲಿದೆ ಅಂತ ಬಿ.ಎಸ್ ಯಡಿಯೂರಪ್ಪ ಹೇಳಿದ್ದರು. ಉಗ್ರರ ಮೇಲಿನ ದಾಳಿಯನ್ನು ಯಡಿಯೂರಪ್ಪ ಅವರು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ, ಇದು ಖಂಡನೀಯ ಎಂದು ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದ್ದು, ಪ್ರತಾಪ್ ಸಿಂಹ ಅವರು ಯಡಿಯೂರಪ್ಪ ಅವರ ಹೇಳಿಕೆಯನ್ನು ತಿರುಚ ಬಾರದು, ರಾಜಕೀಯಕ್ಕಾಗಿ ಬಳಸಿಕೊಳ್ಳಬಾರದು ಅಂತ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ‘ಗಡಿ ನಿಯಂತ್ರಣ ರೇಖೆ ದಾಟಿ, ಉಗ್ರರ ಮೇಲೆ ಪ್ರತಿದಾಳಿ ನಡೆಸಲು 1971ರಿಂದ ಇಲ್ಲಿಯವರೆಗೆ ಯಾವ ಪ್ರಧಾನಿಯೂ ಒಪ್ಪಿರಲಿಲ್ಲ. ಮೋದಿ ಅವರು ಇಂದು ಅಂಥಾ ದೈರ್ಯ ಮಾಡಿದ್ದಾರೆ. ಈ ಬಗ್ಗೆ ಎಲ್ಲರಿಗೂ ಹೆಮ್ಮೆಯಿದೆ. ಇಡೀ ದೇಶ ಪ್ರಧಾನಿಯ ಜೊತೆ ನಿಲ್ಲುತ್ತೆ. ಮತ ಹಾಕಿ ಬೆಂಬಲಿಸುತ್ತಾರೆ ಎನ್ನುವ ಅರ್ಥದಲ್ಲಿ, ಸೀಟು ಹೆಚ್ಚಾಗುತ್ತೆ ಅಂತ ಯಡಿಯೂರಪ್ಪ ಹೇಳಿದ್ದರು. ಇದನ್ನು ತಪ್ಪಾಗಿ ಅರ್ಥೈಸಬೇಕಿಲ್ಲ’ ಎಂದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಬಾಯಿಗೆ ಬಂದಂಗೆ ಮಾತಾಡಿರೋದು ಸರಿಯಲ್ಲ. ಅವರು ಹೀಗೆ ಮಾತಾಡಿ, ಮಾತಾಡಿ ಕೆಟ್ಟರು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈಗ ಅದೇ ಹಾದಿಯಲ್ಲಿ ಸಾಗ್ತಿದ್ದಾರೆ ಅಂದರು.
ಬಿಎಸ್ವೈ ಪರ ಪ್ರತಾಪ್ ಸಿಂಹ ಬ್ಯಾಟಿಂಗ್
TRENDING ARTICLES