ಬೆಂಗಳೂರು : ಪುಲ್ವಾಮಾ ದಾಳಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಅಂತ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಯಾರ್ಕರ್ ಎಸೆದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಪುಲ್ವಾಮಾ ದಾಳಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ. ಭಾರತದ ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಮೋದಿ ಮತ್ತು ಇಮ್ರಾನ್ ಖಾನ್ ಇಬ್ಬರ ಸಹಕಾರವಿಲ್ಲದೇ ಪುಲ್ವಾಮಾ ದಾಳಿ ನಡೆದಿಲ್ಲ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟೀಕರಣ ನೀಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಮ್ರಾನ್ ಖಾನ್ ಜೊತೆ ಮೋದಿ ಮ್ಯಾಚ್ ಫಿಕ್ಸಿಂಗ್ : ಬಿ.ಕೆ ಹರಿಪ್ರಸಾದ್ ಯಾರ್ಕರ್
TRENDING ARTICLES