ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಈಗಾಗಲೇ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಇಟ್ಕೊಂಡು ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಲು ತೆರಳಿದ್ದಾರೆ. ಇತ್ತ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಕೂಡ ಇಂದು ಮಧ್ಯಾಹ್ನ ನವದೆಹಲಿಗೆ ತೆರಳುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸೀಟು ಹಂಚಿಕೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.
ಈಗಾಗಲೇ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ ದೇವೇಗೌಡ್ರು ರಾಹುಲ್ ಗಾಂಧಿ ಅವರ ಜೊತೆ ಚರ್ಚಿಸಿದ್ದಾರೆ. ರಾಜ್ಯದಲ್ಲಿ 10 ರಿಂದ 12 ಕ್ಷೇತ್ರಗಳಿಗೆ ಜೆಡಿಎಸ್ ಪಟ್ಟು ಹಿಡಿದಿದೆ. ಕಾಂಗ್ರೆಸ್ 5 ರಿಂದ 7 ಕ್ಷೇತ್ರ ನೀಡಲು ಮುಂದಾಗಿದೆ. ರಾಹುಲ್ ಗಾಂಧಿ ಜೊತೆ ಸೀಟು ಹಂಚಿಕೆ ಚೌಕಾಸಿಗಿಳೀತಾರಾ ಸಿಎಂ ಅನ್ನೋದನ್ನು ಕಾದು ನೋಡಬೇಕಿದೆ. ಜೊತೆಗೆ ಅತೃಪ್ತ ‘ಕೈ’ ಶಾಸಕರ ಬಗ್ಗೆಯೂ ಚರ್ಚೆ ನಡೆಸಬಹುದು.
ರಾಹುಲ್ ಗಾಂಧಿ ಜೊತೆ ಸೀಟು ಹಂಚಿಕೆ ಚೌಕಾಸಿಗಿಳೀತಾರಾ ಸಿಎಂ?
TRENDING ARTICLES