ನವದೆಹಲಿ : 17ನೇ ಲೋಕಸಭಾ ಚುನಾವಣೆಗೆ ದಿನಾಂಕ ನಿಗಧಿಯಾಗಿದೆ. ಏಪ್ರಿಲ್ 11ರಿಂದ ಒಟ್ಟು 7 ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ರಾಜ್ಯದಲ್ಲಿ ಏಪ್ರಿಲ್ 18 ಮತ್ತು ಏಪ್ರಿಲ್ 23ರಂದು ಎರಡು ಹಂತಗಳಲ್ಲಿ ಮತದಾನ ನಡೆಯುತ್ತದೆ.
ಇಂದಿನಿಂದಲೇ ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತಕ್ಕೆ ಸಂಬಂಧಪಟ್ಟಂತೆ ಮಾರ್ಚ್ 19ರಂದು ನಾಮಪತ್ರ ಸಲ್ಲಿಕೆ ಆರಂಭವಾಗುತ್ತದೆ. ಮಾರ್ಚ್ 26ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ ನಿಗಧಿಯಾಗಿದೆ. ಮಾರ್ಚ್ 27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಮಾರ್ಚ್ 29 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 18ರಂದು ಮತದಾನ ನಡೆಯುತ್ತೆ.
ಎರಡನೇ ಹಂತಕ್ಕೆ ಸಂಬಂಧಪಟ್ಟಂತೆ ಮಾರ್ಚ್ 28ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ. ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ ನಿಗಧಿ ಮಾಡಲಾಗಿದೆ. ಏಪ್ರಿಲ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 8ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 23ರಂದು ಮತದಾನ ನಡೆಯಲಿದೆ.
‘ಲೋಕ’ ಸಮರಕ್ಕೆ ಡೇಟ್ ಫಿಕ್ಸ್ – ರಾಜ್ಯದಲ್ಲಿ 2 ಹಂತಗಳಲ್ಲಿ ಎಲೆಕ್ಷನ್…