ಕೊಪ್ಪಳ: ಕಾಂಗ್ರೆಸ್ ನಾಯಕ ಬಸವರಾಜ್ ರಾಯರೆಡ್ಡಿ ಬೆಂಬಲಿಗರು ಪ್ರಧಾನಿ ನರೇಂದ್ರ ಮೋದಿ ಪರ ಫೇಸ್ಬುಕ್ನಲ್ಲಿ ಪೋಸ್ಟ್ ಅಪ್ಲೋಡ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕರ ಬೆಂಬಲಿಗರು ಮೋದಿ ಪರ ಪೋಸ್ಟ್ ಹಾಕಿರುವುದು ಕೊಪ್ಪಳದಿಂದ ಬಸವರಾಜ್ ರಾಯರೆಡ್ಡಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸ್ತಾರಾ ಅನ್ನೋ ಅನುಮಾನಗಳನ್ನು ಹುಟ್ಟುಹಾಕಿದೆ. ” ದೇಶಕ್ಕಾಗಿ ಮೋದಿ, ಮೋದಿಗಾಗಿ ನಾವು ಎಂಬ ಟ್ಯಾಗ್ ಲೈನ್ನಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಬಸವರಾಜ್ ರಾಯರೆಡ್ಡಿ ಅವರ ಫೋಟೋ ಪೋಸ್ಟ್ ಮಾಡಲಾಗಿದೆ.
ಕೊಪ್ಪಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬಸವರಾಜ ಅವರು ಟಿಕೆಟ್ಗಾಗಿ ದೆಹಲಿ ಮಟ್ಟದಲ್ಲಿ ಲಾಭಿ ನಡೆಸಿದ್ದರು. ಕೊಪ್ಪಳ ಕಾಂಗ್ರೆಸ್ ಟಿಕೆಟ್ ಬಹುತೇಕ ರಾಜಶೇಖರ್ ಹಿಟ್ನಾಳ್ ಅವರಿಗೆ ಫಿಕ್ಸ್ ಆದ ಹಿನ್ನಲೆ ಬಸವರಾಜು ಬಿಜೆಪಿಯತ್ತ ಮುಖಮಾಡಿದ್ದಾರಾ ಅನ್ನೋ ಮಾತುಗಳೂ ಕೇಳಿ ಬರ್ತಿವೆ. ಟಿಕೆಟ್ ಕೊಟ್ರೆ ಬಸವರಾಜ್ ರಾಯರೆಡ್ಡಿ ಅವರು ಬಿಜೆಪಿಗೆ ಬರೋ ಸಾಧ್ಯತೆಯ ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ಬಸವರಾಜ್ ರಾಯರೆಡ್ಡಿ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.