Wednesday, January 15, 2025

ತುಮಕೂರಲ್ಲಿ ಗೌಡ್ರು VS ಗೌಡ್ರು : ನಾಮಪತ್ರ ಸಲ್ಲಿಸಿದ ದೇವೇಗೌಡ್ರು, ಮುದ್ದಹನುಮೇಗೌಡ್ರು..!

ತುಮಕೂರು : ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರು ಹಾಗೂ ಹಾಲಿ ಸಂಸದ ಎಸ್​.ಪಿ ಮುದ್ದಹನುಮೇಗೌಡ ಅವರು ನಾಮಪತ್ರ ಸಲ್ಲಿಸಿ ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.
ದೇವೇಗೌಡ್ರು ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮಧ್ಯಾಹ್ನ 2.11ಕ್ಕೆ ನಾಮಪತ್ರ ಸಲ್ಲಿಸಿದರು. ಸ್ವಕ್ಷೇತ್ರ ಹಾಸನವನ್ನು ಮೊಮ್ಮಗ ಪ್ರಜ್ವಲ್​ ರೇವಣ್ಣ ಅವರಿಗೆ ಬಿಟ್ಟುಕೊಟ್ಟ ಗೌಡರು, ಬೆಂಗಳೂರು ಉತ್ತರದಲ್ಲಿ ಕಣಕ್ಕಿಳಿಯುತ್ತಾರಾ ಅಥವಾ ತುಮಕೂರಲ್ಲಿ ಕಣಕ್ಕಿಳಿಯುತ್ತಾರೋ ಅನ್ನೋ ಕುತೂಹಲವಿತ್ತು. ಕೊನೆಗೆ ಗೌಡರು ತುಮಕೂರನ್ನು ಆಯ್ಕೆ ಮಾಡಿಕೊಂಡು, ಇವತ್ತು ನಾಮಪತ್ರವನ್ನೂ ಸಲ್ಲಿಸಿದ್ದಾರೆ. ಆದರೆ, ತುಮಕೂರಲ್ಲಿ ಗೌಡರ ವಿರುದ್ಧ ಕಾಂಗ್ರೆಸ್ ಸಂಸದ ಎಸ್​.ಪಿ ಮುದ್ದಹನುಮೇಗೌಡ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಹಾಲಿ ಸಂಸದ ಆಗಿದ್ದರೂ ಅವರನ್ನು ಕಡೆಗಾಣಿಸಿ ಜೆಡಿಎಎಸ್​ಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದಕ್ಕೆ ಮುದ್ದಹನುಮೇಗೌಡರ ಆಕ್ರೋಶಕ್ಕೆ ಕಾರಣವಾಗಿದೆ. ಅವರು ಹಠಕ್ಕೆ ಬಿದ್ದು ದೊಡ್ಡಗೌಡರ ವಿರುದ್ಧ ಸ್ವಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ.

RELATED ARTICLES

Related Articles

TRENDING ARTICLES