Monday, December 23, 2024

ಕರ್ನಾಟಕದಲ್ಲಿ 2 ಹಂತಗಳಲ್ಲಿ ಎಲೆಕ್ಷನ್ – ಇಲ್ಲಿದೆ ಪಕ್ರಿಯೆಯ ಕಂಪ್ಲೀಟ್​ ಡಿಟೇಲ್ಸ್..!

ನವದೆಹಲಿ : 17ನೇ ಲೋಕಸಭಾ ಚುನಾವಣೆಗೆ ದಿನಾಂಕ ನಿಗಧಿಯಾಗಿದೆ. ಏಪ್ರಿಲ್ 11ರಿಂದ ಒಟ್ಟು 7 ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ರಾಜ್ಯದಲ್ಲಿ ಏಪ್ರಿಲ್ 18 ಮತ್ತು ಏಪ್ರಿಲ್​ 23ರಂದು ಎರಡು ಹಂತಗಳಲ್ಲಿ ಮತದಾನ ನಡೆಯುತ್ತದೆ.
ಇಂದಿನಿಂದಲೇ ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತಕ್ಕೆ ಸಂಬಂಧಪಟ್ಟಂತೆ ಮಾರ್ಚ್​ 19ರಂದು ನಾಮಪತ್ರ ಸಲ್ಲಿಕೆ ಆರಂಭವಾಗುತ್ತದೆ. ಮಾರ್ಚ್ 26ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ ನಿಗಧಿಯಾಗಿದೆ. ಮಾರ್ಚ್ 27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಮಾರ್ಚ್ 29 ನಾಮಪತ್ರ ವಾಪಸ್​ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 18ರಂದು ಮತದಾನ ನಡೆಯುತ್ತೆ.
ಎರಡನೇ ಹಂತಕ್ಕೆ ಸಂಬಂಧಪಟ್ಟಂತೆ ಮಾರ್ಚ್ 28ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ. ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ ನಿಗಧಿ ಮಾಡಲಾಗಿದೆ. ಏಪ್ರಿಲ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್​ 8ರಂದು ನಾಮಪತ್ರ ವಾಪಸ್​ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್​ 23ರಂದು ಮತದಾನ ನಡೆಯಲಿದೆ.

‘ಲೋಕ’ ಸಮರಕ್ಕೆ ಡೇಟ್​ ಫಿಕ್ಸ್ – ರಾಜ್ಯದಲ್ಲಿ 2 ಹಂತಗಳಲ್ಲಿ ಎಲೆಕ್ಷನ್…

RELATED ARTICLES

Related Articles

TRENDING ARTICLES