Saturday, January 11, 2025

‘ಶಾಸಕ ಎಂ.ಸಿ. ಮನಗೂಳಿ ವಿಧಿವಶ’

ವಿಜಯಪುರ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವಿಜಯಪುರ ಜಿಲ್ಲೆ ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ (85) ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ತಡರಾತ್ರಿ 1 ಗಂಟೆಗೆ ನಿಧನರಾಗಿದ್ದಾರೆ.

ಸಿಂಧಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಅವರು, ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದರು. ಸೆಪ್ಟೆಂಬರ್ 29, 1937 ರಲ್ಲಿ ಜನಿಸಿದ ಅವರು 1994 ರಲ್ಲಿ ಮೊದಲ ಬಾರಿಗೆ ಜನತಾದಳದಿಂದ ಶಾಸಕರಾಗಿದ್ದರು. ಮನಗೂಳಿಯವರು 1994ರಲ್ಲಿ ಹೆಚ್.ಡಿ. ದೇವೇಗೌಡರ ಸಂಪುಟದಲ್ಲಿ ಸಚಿವರಾಗಿದ್ದರು. 2018 ರಲ್ಲಿ ಹೆಚ್.ಡಿ. ಕುಮಾರಸ್ವಾಮಿ ಮೈತ್ರಿ ಸರ್ಕಾರದ ಸಂಪುಟದಲ್ಲಿ ತೋಟಗಾರಿಕೆ ಸಚಿವರಾಗಿದ್ದರು.

ಉಸಿರಾಟದ ಸಮಸ್ಯೆಯಿಂದ 15 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಪೂರ್ಣ ಹೆಸರು ಮಲ್ಲಪ್ಪ ಚನ್ನವೀರಪ್ಪ ಮನಗೂಳಿ, ಪತ್ನಿ, ಓರ್ವ ಪುತ್ರಿ, ನಾಲ್ವರು ಪುತ್ರರು ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

 

RELATED ARTICLES

Related Articles

TRENDING ARTICLES